ಉಗ್ರಪ್ಪ – ಸಲೀಂ ಗುಸುಗುಸು ಕುರಿತು ಸಿ.ಟಿ.ರವಿ ವ್ಯಂಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.13- ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು @INCKarnataka ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷ@D.K.Shivakumar  ಅವರು ನಡೆಸುತ್ತಿರುವ ಕಲೆಕ್ಷನ್ ಗುಟ್ಟನ್ನು ಕೊನೆಗೂ ಅವರದೇ ಪಕ್ಷದ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಸಲೀಂ ಗುಸುಗುಸಿನಲ್ಲೇ ಜಗಜ್ಜಾಹಿರು ಮಾಡಿದ್ದಾರೆ. ಕಾಣದ ಕಲೆಕ್ಷನ್ ಇನ್ನು ಎಷ್ಟಿರಬಹುದೆಂದು? ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ನಿಮಗೆ ಖೆಡ್ಡಾ ತೋಡಲು ಪ್ರಾಯಶಃ ಸಜ್ಜಾಗಿರುವಂತೆ ಕಾಣುತ್ತಿದೆ. ಒಂದು ಕಡೆ ತಮ್ಮ ನಾಯಕನನ್ನು ಹೊಗಳಿ, ಇನ್ನೊಂದು ಕಡೆ ನಿಮ್ಮನ್ನು ಜನತೆ ಮುಂದೆ ಬೆತ್ತಲು ಮಾಡಲು ಹೊರಟಿದಂತಿದೆ. ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ವ್ಯಂಗ್ಯಭರಿತ ಸಲಹೆ ಕೊಟ್ಟಿದ್ದಾರೆ.

ಐಟಿ-ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಬೊಬ್ಬೆ ಹೊಡೆಯುವ ನಾಯಕರೇ ನಿಮ್ಮ ಅಧ್ಯಕ್ಷರ ಬ್ರಹ್ಮಾಂಡ ಭ್ರಷ್ಟಾಚಾರ ಬೆತ್ತಲಾಗಿದೆ. ಭ್ರಷ್ಟ ಅಧ್ಯಕ್ಷನನ್ನು ಇಟ್ಟುಕೊಂಡು ಉಪಚುನಾವಣೆಯಲ್ಲಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

Facebook Comments