ಮಿಜೋರಾಂನಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆ

ಈ ಸುದ್ದಿಯನ್ನು ಶೇರ್ ಮಾಡಿ

ಐಜ್ವಾಲ್, ನ.28- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ.  ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ ಮಾಡಿದರು.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ರಾಜ್ಯದಲ್ಲಿ ನಡೆಯುವ ಎಲ್ಲಾ ಸೈಬರ್ ಕ್ರೈಂಗಳ ವಿಚಾರಣೆ ನಡೆಸಲಾಗುವುದು ಎಂದು ಸಿಂಗ್ ತಿಳಿಸಿದರು. ಕಳೆದ ಮೇ ತಿಂಗಳಿನಿಂದ ಮಿಜೋರಾಂನಲ್ಲಿ 11ಕ್ಕೂ ಹೆಚ್ಚು ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ ಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ.

Facebook Comments