ಫನಿ ಚಂಡಮಾರುತ : ಓಡಿಶಾದ 11 ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ವಾಪಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಭುವನೇಶ್ವರ್, ಮೇ 1- ಓಡಿಶಾ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಫನಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿ ಎದುರಿಸಲು ಅನುಕೂಲವಾಗುವಂತೆ ಓಡಿಶಾದಲ್ಲಿ 11ಜಿಲ್ಲೆಗಳಲ್ಲಿ ಹೇರಲಾಗಿದ್ದ ನೀತಿ ಸಂಹಿತೆಯನ್ನು ಹಿಂಪಡೆಯಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಫನಿ ಚಂಡಮಾರುತದ ಪರಿಣಾಮದ ಬಗ್ಗೆ ಎಚ್ಚರಿಕೆ ನೀಡಿರುವ ಬೆನ್ನೆಲೆ ಓಡಿಶಾ ಸೇರಿದಂತೆ 4ರಾಜ್ಯದಗಳು ಪರಿಸ್ಥಿತಿ ಎದುರಿಸಲು ಸಜ್ಜಾಗಿವೆ. ಓಡಿಶಾದ ಕರಾವಳಿ ಪ್ರದೇಶದ ಮೇಲೆ ಭಾರೀ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಮುನ್ನಚ್ಚರಿಕೆ ನೀಡಿದೆ.

ಇದೇ ಕಾರಣಕ್ಕೆ ಒಡಿಶಾದ 11 ಜಿಲ್ಲೆಗಳಲ್ಲಿ ಈ ಹಿಂದೆ ಹೇರಲಾಗಿದ್ದ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಹಿಂದಕ್ಕೆ ಪಡೆದಿದೆ. ಓಡಿಶಾದಲ್ಲಿ ಮೇ 6ರಂದು 5ನೇ ಹಂತದ ಚುನಾವಣೆ ನಡೆಯಲಿದೆ.

ಪ್ರಮುಖವಾಗಿ ಒಡಿಶಾದ ಪುರಿ, ಜಗತ್ ಸಿಂಗ್ ಪುರ್, ಕೇಂದ್ರಪಾರ, ಭದ್ರಕ್, ಬಾಲಾಸೋರ್, ಮಯೂರ್ ಭಂಜ್, ಗಜಪತಿ, ಗಂಜಮ್, ಖೋರ್ದಾ, ಕಟಕ್ ಮತ್ತು ಜಾಜ್ಪುರ್‍ನಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಒಡಿಶಾದಲ್ಲಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಸ್ಪತಃ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದ್ದು, ಒಡಿಶಾದಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಅಗತ್ಯತೆ ಇರುವುದರಿಂದ ನೀತಿ ಸಂಹಿತೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆಯುತ್ತಿರುವುದಾಗಿ ಹೇಳಿದೆ.

Facebook Comments

Sri Raghav

Admin