ಸಿಲಿಂಡರ್ ಸ್ಫೋಟ : ನಾಲ್ವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಪುಣೆ,ಸೆ.2- ಅನಿಲ ಸೋರಿಕೆಯಾಗಿ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.  ಪುಣೆಯ ಗಣೇಶನಗರ ಪ್ರದೇಶದ ವಡ್ಗಾನ್ ಶೆರ್ರಿ ಉಪನಗರದಲ್ಲಿರುವ ಮೂರನೇ ಮಹಡಿಯ ಅಪಾರ್ಟ್‍ಮೆಂಟ್‍ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಗೋಡೆಯ ಕುಸಿತಕ್ಕೆ ಕಾರಣಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ. ರಾತ್ರಿಯಿಡೀ ಎಲ್‍ಪಿಜಿ ಗ್ಯಾಸ್ ಸೋರಿಕೆಯಾಗಿರಬಹುದು ಮತ್ತು ಮನೆಯಲ್ಲಿ ಗ್ಯಾಸ್ ಹತ್ತಿಸಿದಾಗ ಅಥವಾ ಲೈಟ್ ಹಾಕಿದಾಗ ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಚಂದನ್ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ, ಘಟನೆಯಲ್ಲಿ ನಾಲ್ಕು ಜನರು ಗಾಯಗೊಂಡಿದ್ದಾರೆ ಮತ್ತು ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Facebook Comments