ಸಿಲಿಂಡರ್ ಸ್ಫೋಟ : ತಾಯಿ-ಮಗಳು ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ, ಜ.6- ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಸಂಜೀವರಾಯನಕೋಟೆ ನಿವಾಸಿಗಳಾದ ಪಾರ್ವತಿ ಮತ್ತು ಹುಲಿಗೆಮ್ಮ ಮೃತಪಟ್ಟ ದುರ್ದೈವಿಗಳು.

ಇಂದು ಮುಂಜಾನೆ ಎಲ್‍ಪಿಜಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ತಾಯಿ-ಮಗಳಿಗೆ ಬೆಂಕಿ ತಗುಲಿ ಸುಟ್ಟುಗಾಯಗಳಾಗಿ ಮೃತಪಟ್ಟಿದ್ದಾರೆ.
ಸ್ಫೋಟದ ತೀವ್ರತೆಯಿಂದಾಗಿ ಮನೆಯೂ ಸಹ ಸಂಪೂರ್ಣ ಹಾನಿಗೀಡಾಗಿದೆ. ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments