ಉಪಚುನಾವಣೆ ಫಲಿತಾಂಶಕ್ಕೆ ಡಿಕೆಶಿ ಪ್ರತಿಕ್ರಿಯೆ ಏನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.9- ಉಪ ಚುನಾವಣೆಯ ತೀರ್ಪು ಆಶ್ಚರ್ಯ ತಂದಿದೆ. ಮತದಾರರ ತೀರ್ಪನ್ನು ನಾವು ಒಪ್ಪಬೇಕಾಗುತ್ತದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಚುನಾವಣೆಯ ಫಲಿತಾಂಶವನ್ನು ಗಮನಿಸಿದರೆ ಯಾರೂ ಯಾವ ಪಕ್ಷಕ್ಕೆ ಬೇಕಾದರೂ ಹೋಗಬಹುದು.

ಚುನಾವಣೆಗೆ ನಿಲ್ಲಬಹುದು ಎಂಬಂತಿದೆ. ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತಿದೆ. ಸಂಪೂರ್ಣವಾಗಿ ನೆಲಕಚ್ಚಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾವೆಲ್ಲ ಗಟ್ಟಿಯಾಗಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಕಟ್ಟುತ್ತೇವೆ ಎಂದು ಹೇಳಿದರು.

ನಾಯಕತ್ವ ಬದಲಾವಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಈ ವಿಷಯ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗುತ್ತೇವೆ ಎಂದು ತಿಳಿಸಿದರು.

ರಾಮನಗರ ಜಿಲ್ಲೆ ಕ್ಲೀನ್ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಎಲ್ಲಾ ಕ್ಲೀನ್ ಮಾಡಲಿ, ಬುಡ ಸಮೇತ ಕಿತ್ತು ಹಾಕಲಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

Facebook Comments

Sri Raghav

Admin