ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ : ಡಿವಿಎಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.18- ಟೆಲಿಫೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ ಎಂದು ಕೇಂದ್ರ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸುವ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ.

ಫೋನ್ ಕದ್ದಾಲಿಕೆ ಅಕ್ಷಮ್ಯ ಅಪರಾಧವಾಗಿದ್ದು, ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ಈ ವಿಚಾರದಲ್ಲಿ ಸೇಡಿನ ರಾಜಕಾರಣದ ಪ್ರಶ್ನೆಯೇ ಇಲ್ಲ ಎಂದರು. ಕಾಂಗ್ರೆಸ್ ನಾಯಕರು ಕೂಡ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯಿಸಿದ್ದರು.

ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದರು. ಮಾಜಿ ಸಚಿವ ಸಿ.ಟಿ.ರವಿ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು.

ಟೆಲಿಫೋನ್ ಕದ್ದಾಲಿಕೆ ಮಹಾ ಅಪರಾಧವಾಗಿದೆ. ಅಧಿಕಾರಿಗಳು ಆಡಳಿತದಲ್ಲಿರುವವರ ಬಕೆಟ್ ಹಿಡಿಯುವ ಕೆಲಸ ಮಾಡುವ ಪ್ರವೃತ್ತಿಗೆ ಕಡಿವಾಣ ಬೀಳಬೇಕಿದೆ ಎಂದರು.

Facebook Comments

Sri Raghav

Admin