ಭಯಾನಕ ಹಂತ ತಲುಪಿದ ಕೊರೊನಾ ಹಾಟ್‌ಸ್ಪಾಟ್‌ ಬೆಂಗಳೂರು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.2-ದಿನೇ ದಿನೇ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿರುವುದರಿಂದ ಸಿಲಿಕಾನ್ ಸಿಟಿ ಡೇಂಜರ್ ಸಿಟಿಯಾಗಿ ಪರಿವರ್ತನೆಯಾಗಿದೆ. ಇಂದು ಒಂದೇ ದಿನ 22317 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು,ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.

ನಿನ್ನೆ 20121 ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಇದೀಗ 22 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ಉದ್ದೇಶದಿಂದ ವೀಕೆಂಡ್ ಕಫ್ರ್ಯೂ ಜಾರಿಗೊಳಿಸಲಾಗಿದ್ದರೂ ಯಾವುದೆ ಪ್ರಯೋಜನವಾಗುತ್ತಿಲ್ಲ.

ಕಳೆದ ವಾರ ವೀಕೆಂಡ್ ಜಾರಿಯಲ್ಲಿದ್ದರೂ ನೂರಾರು ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಇಂದು ಮತ್ತು ನಾಳೆ ವೀಕೆಂಡ್ ಜಾರಿಯಲ್ಲಿದ್ದರೂ ನಾಳೆ ಇನ್ನೆಷ್ಟು ಮಂದಿಗೆ ಸೋಂಕು ಕಾಣಿಸಿಕೊಳ್ಳುವುದೋ ಎಂಬ ಭೀತಿ ಆರಂಭವಾಗಿದೆ. ಸೋಂಕು ತಡೆಗೆ ಏನೆ ಕ್ರಮ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆಗಳಿವೆ.

Facebook Comments