ತುರ್ತುಪರಿಸ್ಥಿತಿ ದೇಶದ ಕರಾಳ ಅಧ್ಯಾಯ : ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.25-ತುರ್ತು ಪರಿಸ್ಥಿತಿಯಂತಹ ಕರಾಳ ದಿನವನ್ನು ಯಾರು ಮರೆಯಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ತುರ್ತು ಪರಿಸ್ಥಿತಿ ಜಾರಿಯಾಗಿ 46 ವರ್ಷ ಸಂದ ಸಂದರ್ಭದಲ್ಲಿ ಟ್ವಿಟ್ ಮಾಡಿರುವ ಅವರು, ನಮ್ಮ ಸಂವಿಧಾನದಲ್ಲಿರುವ ಮೌಲ್ಯ ಮತ್ತು ಪ್ರಜಾಪ್ರಭುತ್ವವನ್ನು ಸದುಪಯೋಗಪಡಿಸಿಕೊಂಡು ಭವ್ಯ ಭಾರತ ನಿರ್ಮಿಸುವ ಹೊಣೆ ನಮ್ಮೇಲರ ಮೇಲಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿಗೆ ಕಾರಣ ಯಾರು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ, ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಯಾವ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡಿತ್ತು ಎನ್ನುವುದಕ್ಕೆ ಇದಕ್ಕಿಂತ ಉದಾಹರಣೆ ಬೇರೊಂದಿಲ್ಲ ಎಂದಿದ್ದಾರೆ.

1975ರಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡವರಿಂದಲೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದೇ ರೀತಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷದ ವಿರುದ್ಧ ಚುಚ್ಚು ಮಾತಿನ ಬಾಣ ಬಿಟ್ಟಿದ್ದಾರೆ.

Facebook Comments