ದರ್ಶನ್ ಭೇಟಿಗೆ ಕುಟುಂಬದವರಿಗೆ ಮಾತ್ರ ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

Daershan--0141

ಮೈಸೂರು,ಸೆ.26- ಕಳೆದ ಎರಡು ದಿನಗಳಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೋಡಲು ಇಂದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರಲಿಲ್ಲ.  ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ತಂಡೋಪ ತಂಡವಾಗಿ ಆಸ್ಪತ್ರೆ ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದರು.

ಆದರೆ ದರ್ಶನ್ ಕುಟುಂಬದವರನ್ನು ಹೊರತುಪಡಿಸಿ ಇನ್ಯಾರಿಗೂ ದರ್ಶನ್ ನೋಡಲು ಅವಕಾಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳ ಸಂಖ್ಯೆ ಕ್ಷೀಣಿಸಿತ್ತು. ಚೇತರಿಸಿಕೊಂಡಿರುವ ದರ್ಶನ್ ಅವರು ಬಹುಶಃ ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ.

# ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹೇಗಿದ್ದಾರೆ?
ಮೊನ್ನೆಯಷ್ಟೇ ನಸುಕಿನ ಜಾವದಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ವೈದ್ಯರು ಮಾಹಿತಿ ನೀಡುವ ಸಾಧ‍್ಯತೆಯಿದೆ.

ದರ್ಶನ್ ಜತೆಗೆ ಕಾರಿನಲ್ಲಿದ್ದು, ಗಾಯಗೊಂಡಿದ್ದ ನಟ ದೇವರಾಜ್ ಮತ್ತು ಪುತ್ರ ಪ್ರಜ್ವಲ್ ದೇವರಾಜ್ ನಿನ್ನೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ ದರ್ಶನ್ ಗೆ ಇನ್ನೂ ಚಿಕಿತ್ಸೆ ಮುಂದುವರಿದಿದೆ. ಕೈ ಶಸ್ತ್ರ ಚಿಕಿತ್ಸೆಗೊಳಗಾಗಿರುವ ದರ್ಶನ್ ಇಂದೂ ಡಿಸ್ಚಾರ್ಜ್ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ನಡುವೆ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Facebook Comments

Sri Raghav

Admin