ಕೊರೊನಾ ಯೋಧರಿಗೆ ದಶಮುಖ ಸೇವಾ ರತ್ನ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.25- ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ಫೆ.27 ರಂದು ನಗರದ ನಯನ ಸಭಾಂಗಣದಲ್ಲಿ ಕೊರೊನಾ ವಾರಿಯರ್ಸ್‍ಗಳಿಗೆ ದಶಮುಖ ಸಾಮಾಜಿಕ ಸೇವಾ ರತ್ನ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರ ಕಾರ್ಮಿಕರಿಗೆ ಹಾಗೂ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಹಗಲಿರುಳು ಸೇವೆ ಸಲ್ಲಿಸಿ ಸಾಮಾಜಿಕ ಪ್ರಜ್ಞೆ ಮೆರೆದಿರುವವರು ಗುರುತಿಸಬೇಕು ಎಂಬ ಉದ್ದೇಶದಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಹೆಚ್.ಕೆ.ಬೊಮ್ಮೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ಸಂತೋಷ್ ಭಾರತಿ ಶ್ರೀಪಾದರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಸಚಿವ ಚಲುವರಾಯ ಸ್ವಾಮಿ ಹಾಗೂ ಶಾಸಕ ಉದಯ್ ಗರುಡಾಚಾರ್ ಸಮಾರಂಭ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸತೀಶ್ ರೆಡ್ಡಿ ವಹಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಸಾಹಿತಿ ಜರಗನಹಳ್ಳಿ ಶಿವಶಂಕರ್, ಮಾಜಿ ಮೇಯರ್ ಎಸ್.ಕೆ.ನಟರಾಜ್, ಮಾಜಿ ಉಪಮೇಯರ್ ರಾಮ್ ಮೋಹನ್‍ರಾಜ್, ಬಿಎಂಟಿಸಿ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕೊರೊನಾ ವಾರಿಯರ್ಸ್ ಗಳಾದ ಡಾ.ನರೇಂದ್ರ, ಡಾ.ಕುಮಾರ್, ಎಚ್.ದೇವರಾಜು, ಮಹೇಶ್, ಶ್ರೀಧರ್ ಅವರುಗಳಿಗೆ ದಶಮುಖ ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಬೊಮ್ಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments