7 ಸಿಬ್ಬಂದಿಗೆ ಕೊರೊನಾ : ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸೀಲ್ ಡೌನ್

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಆ.11- ಜಿಲ್ಲಾಧಿಕಾರಿ ಕಚೇರಿಯ ಏಳು ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕಚೇರಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಇಂದು ಒಂದು ದಿನ ಕಚೇರಿಯನ್ನು ಸಂಪೂರ್ಣವಾಗಿ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದ್ದು, ಕಚೇರಿಯಲ್ಲಿ ಯಾವುದೇ ಕೆಲಸ-ಕಾರ್ಯಗಳು ನಡೆಯುವುದಿಲ್ಲ.

ನಾಳೆ ಎಂದಿನಂತೆ ಕೆಲಸ-ಕಾರ್ಯಗಳು ನಡೆಯಲಿವೆ ಎಂದು ಜಿಲ್ಲಾಕಾರಿ ತಿಳಿಸಿದ್ದಾರೆ. ಜಿಲ್ಲಾಕಾಧಿರಿಗಳ ಕಚೇರಿ ಸಿಬ್ಬಂದಿಗಳು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಜಿಲ್ಲಾಕಾರಿ ಮಹಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Facebook Comments

Sri Raghav

Admin