ಮತ್ತೆ ಪ್ರಧಾನಿಯಾದ ಮೋದಿ, ಬೆಚ್ಚಿಬಿದ್ದ ಪಾತಕಿ ದಾವೂದ್ ಮಾಡಿದ್ದೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ ಕರಾಚಿ, ಮೇ 25-ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿರುವುದರಿಂದ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆದರಿ ಕಂಗಾಲಾಗಿದ್ದಾನೆ.

ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತನ್ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭಯಭೀತನಾಗಿರುವ ದಾವೂದ್ ತನಗೆ ಸೂಕ್ತ ರಕ್ಷಣೆ ನೀಡುವಂತೆ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‍ಐ ಮತ್ತು ಸೇನಾ ಮುಖ್ಯಸ್ಥರಲ್ಲಿ ಮನವಿ ಮಾಡಿದ್ದಾನೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಎನ್‍ಡಿಎ ಸರ್ಕಾರ ಮತ್ತು ಮೋದಿ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದರಿಂದ ತನ್ನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟು ಬೀಳಲಿದೆ ಎಂದು ಹೆದರಿರುವ ದಾವೂದ್ ಕರಾಚಿಯ ಗೌಪ್ಯ ಸ್ಥಳವೊಂದರಲ್ಲಿ ಐಎಸ್‍ಐ ಮತ್ತು ಪಾಕ್ ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತನ್ನ ಆತಂಕವನ್ನು ಹೇಳಿಕೊಂಡಿದ್ದಾನೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾವೂದ್ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡು ಭಾರತದಲ್ಲಿ ಆತನ ಅಕ್ರಮ, ಅವ್ಯವಹಾರಗಳಿಗೆ ಕೊಡಲಿ ಪೆಟ್ಟು ನೀಡಿತ್ತು. ಅಲ್ಲದೆ, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇದ್ದ ಆತನ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಈಗ ಎರಡನೇ ಬಾರಿ ಮೋದಿ ಅಧಿಕಾರಕ್ಕೆ ಬಂದಿರುವುದರಿಂದ ತನ್ನ ವಿರುದ್ಧ ಮತ್ತಷ್ಟು ಉಗ್ರ ಕ್ರಮ ಕೈಗೊಳ್ಳುವುದು ಖಚಿತ ಎಂಬುದು ದಾವೂದ್ ಮನದಟ್ಟಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ