ಪ್ರತಿ ತಿಂಗಳಲ್ಲಿ ಒಂದು ದಿನ ಕೆರೆ, ಸರ್ಕಾರಿ ಜಾಗ ಒತ್ತುವರಿ ತೆರವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.1- ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಪ್ರತಿ ತಿಂಗಳಲ್ಲಿ ಒಂದು ದಿನ ನಿಗದಿಪಡಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಮತ್ತು ಆಸ್ತಿ ಸಂರಕ್ಷಣೆ ಮಾಡಲಾಗಿದೆ. ಒತ್ತುವರಿ ಸಕ್ರಮ ಮಾಡಲು ಅವಕಾಶವಿಲ್ಲ.

827 ಕೆರೆಗಳಿವೆ. ಸರ್ವೆ ಕಾರ್ಯ ಮುಗಿದಿದೆ. ಒಂದು ವೇಳೆ ಸರ್ವೆ ಆಗದಿದ್ದರೆ ಮಾಹಿತಿ ಸಂಗ್ರಹಿಸಿ ಅಂಗಳ ಒತ್ತುವರಿ ತೆರವಿಗೆ ಹಾಗೂ ರಾಜ ಕಾಲುವೆ ಒತ್ತುವರಿ ತೆರವು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು.ಈಗಾಗಲೇ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ ಒತ್ತುವರಿ ತೆರವನ್ನು ಕಾಲ ಮಿತಿಯಲ್ಲಿ ತೆರವಿಗೆ ಆದ್ಯತೆ ನೀಡಲಾಗುವುದು.

ಪ್ರತಿ ತಿಂಗಳ 3ನೆ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಎಂಬ ಕಾರ್ಯಕ್ರಮ ಇರುವುದರಿಂದ ಒತ್ತುವರಿ ತೆರವಿಗೆ ದಿನ ನಿಗದಿಪಡಿಸಲಾಗುವುದು ಎಂದರು. ರಸ್ತೆ ಸೇರಿದಂತೆ ಮೂಲ ಸೌಲಭ್ಯವಿಲ್ಲದ ಸಂಬಂಧಪಟ್ಟ ಸಂಸ್ಥೆ, ಇಲಾಖೆ ಹಾಗೂ ಸಂಸ್ಥೆಗಳಿಂದ ಅನುಮತಿ ಪಡೆಯದ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ಅವರು ಹೇಳಿದರು.

Facebook Comments