ಸುವ್ಯವಸ್ಥಿತ ಮತ ಎಣಿಕೆ : ಜಿಲ್ಲಾಧಿಕಾರಿಗೆ ಪ್ರಶಂಸೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಮೇ 24- ಅರ್ಚಕರಹಳ್ಳಿ ಬಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯವನ್ನು ಯಾವುದೇ ಲೋಪವಿಲ್ಲದೆ ನಡೆಸಿದ ಜಿಲ್ಲಾಧಿಕಾರಿ ಚುನಾವಣಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರ ಕರ್ತವ್ಯ ನಿಷ್ಠೆಗೆ ಚುನಾವಣಾ ವೀಕ್ಷಕರು ಅಭಿನಂದಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಿದ್ದ ಜಿಲ್ಲಾಧಿಕಾರಿ ಹಾಗೂ ಅವರು ಮತ ಎಣಿಕೆಯನ್ನು ವ್ಯವಸ್ಥಿತವಾಗಿ ನಡೆಸಿ ಪ್ರಶಂಸೆಗೆ ಒಳಗಾಗಿದ್ದಾರೆ.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಂದು ತಿಂಗಳಿಂದ ಇರಿಸಲಾಗಿದ್ದ ಮತಯಂತ್ರಗಳನ್ನು ಸರಿಯಾದ ಸಮಯಕ್ಕೆ ತೆರೆಲಾಗಿತ್ತು. ಅಂಚೆ ಮತಪತ್ರ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರಗಳಿಂದ ಮತ ಎಣಿಕೆ ಕಾರ್ಯವನ್ನು ನಿಗದಿತ ಮೇಜುಗಳಲ್ಲಿ ಇರಿಸಿ ಅಭ್ಯರ್ಥಿಗಳ ಪರ ಏಜೆಂಟರ ಸಮ್ಮುಖದಲ್ಲಿ ನೆರವೇರಿಸಲಾಯಿತು.

ಸುಮಾರು 25 ಸುತ್ತುಗಳಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳ ಮತ ಎಣಿಕೆ ತ್ವರಿತಗತಿಯಲ್ಲಿ ನಡೆಯುತ್ತಿದ್ದರೆ, ಸಂಬಂಧಿಸಿದ ಮಾಹಿತಿಯನ್ನು ಚುನಾವಣಾ ಆಯೋಗ ಹಾಗೂ ಮಾಧ್ಯಮ ಕೇಂದ್ರಕ್ಕೆ ನಿಸ್ತಂತು ವ್ಯವಸ್ಥೆಯ ಮೂಲಕ ರವಾನಿಸಲಾಯಿತು.

ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. 800ಕ್ಕೂ ಹೆಚ್ಚು ಪೆÇಲೀಸ್ ಹಾಗೂ ಭದ್ರತಾ ಸಿಬ್ಬಂದಿ ಭಾಗವಹಿಸಿ ಆಗಮಿಸುವ ಎಲ್ಲರನ್ನೂ ಪರಿಶೀಲಿಸಿ ಎಣಿಕೆ ಕೇಂದ್ರಕ್ಕೆ ಕಳುಹಿಸಿದರು.

ವಾಹನ ನಿಲುಗಡೆ ವ್ಯವಸ್ಥೆ, ಊಟದ ವ್ಯವಸ್ಥೆ ಯಾವುದೇ ನೂಕುನುಗ್ಗಲಿಗೆ ಅವಕಾಶ ನೀಡಲಿಲ್ಲ. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಅವರು ಹೆಚ್ಚಿನ ಆಸಕ್ತಿ ವಹಿಸಿ ಸಂಬಂಧಿಸಿದ ಅಧಿಕಾರಿ ಸಿಬ್ಬಂದಿಗೆ ಸೂಚನೆ ನೀಡಿದ್ದರಿಂದ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆದು ಫಲಿತಾಂಶವನ್ನು ಯಾವುದೇ ಗೊಂದಲವಿಲ್ಲದೆ ಪ್ರಕಟಿಸಲು ಸಾಧ್ಯವಾಯಿತು. ಅಭ್ಯರ್ಥಿಗಳು ಹಾಗೂ ಏಜೆಂಟರು ಈ ಅಚ್ಚುಕಟ್ಟಾದ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ