ದೇವಾಲಯಗಳಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ರವೀಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.30- ಹೊಸ ವರ್ಷ ಆಚರಣೆ ಸಂಬಂಧ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ/ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಒಳಪಡುವ ಧಾರ್ಮಿಕ ಸಂಸ್ಥೆಗಳು ಅಥವಾ ದೇವಾಲಯಗಳಲ್ಲಿ ನಾಳೆಯಿಂದ (ಡಿ.31) ಜನವರಿ 2 ರವರೆಗೆ ನಿಷೇಧಾಜ್ಞಾಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶಿಸಿದ್ದಾರೆ.

ಹೊಸ ವರ್ಷ ಆಚರಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯ ಅಥವಾ ಧಾರ್ಮಿಕ ಸಂಸ್ಥೆಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು ಅಥವಾ ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.

ಹೊಸ ವರ್ಷಾಚರಣೆ ಸಂಬಂಧದಲ್ಲಿ ದೇವಾಲಯ ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿಬರ್ಂಧವಿರುವುದಿಲ್ಲ.

ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಅದರಂತೆ ಬಹು ಮುಖ್ಯವಾಗಿ 65 ವರ್ಗದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ದೇವಾಲಯ ಮತ್ತು ಧಾರ್ಮಿಕ ಸಂಸ್ಥಗಳಲ್ಲಿ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸತಕ್ಕದ್ದು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸ ಬೇಕೆಂದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments