ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೊನಾ ಶಂಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.2- ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದರಿಂದ ಆತಂಕಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಇರುವ ದೊಡ್ಡಬಳ್ಳಾಪುರದ ಕಚೇರಿ ಹಾಗೂ ಬೆಂಗಳೂರಿನ ಕಂದಾಯ ಭವನದಲ್ಲಿರುವ ತಹಸೀಲ್ದಾರ್ ಕಚೇರಿಯನ್ನು ಸೀಲ್‍ಡೌನ್ ಮಾಡುವ ಕುರಿತಂತೆ ಚಿಂತನೆ ನಡೆದಿದೆ.

ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಹಸೀಲ್ದಾರ್‍ಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಜಿಲ್ಲಾಧಿಕಾರಿ ಕರೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದು ಈಗ ಆತಂಕಕ್ಕೆ ಕಾರಣವಾಗಿದೆ.

ಈಗಾಗಲೇ ಕಚೇರಿಯನ್ನು ವೈರಾಣು ನಿಯಂತ್ರಣ ರಾಸಾಯನಿಕ ಸಿಂಪಡಿಸಿ ಸ್ವಚ್ಛಗೊಳಿಸಲಾಗುತ್ತಿದೆ. ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ರವೀಂದ್ರ ಅವರನ್ನು ದೇವನಹಳ್ಳಿ ಬಳಿಯ ಆಕಾಶ್ ಆಸ್ಪತ್ರೆಗೆ ದಾಖಲಿಸುವ ಬಗ್ಗೆಯೂ ಕೂಡ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.

Facebook Comments