ಶ್ರೀರಾಮನ ದರ್ಶನ ಪಡೆದ ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಜೂ.19- ಶತಶತಮಾನಗಳು ಕಳೆದರೂ ಶ್ರೀರಾಮನ ಮೇಲಿರುವ ಭಾರತೀಯರ ನಂಬಿಕೆ, ಭಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ನಮ್ಮ ನರನಾಡಿಗಳಲ್ಲೂ ಆ ಸೀತಾರಾಮನೇ ತುಂಬಿಹೋಗಿದ್ದಾನೆ. ಪ್ರಸಕ್ತ ಕಾಲಘಟ್ಟದಲ್ಲಿ ನಾವು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ರಾಮತತ್ತ್ವದಲ್ಲೇ ಪರಿಹಾರವಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನï.ಅಶ್ವತ್ಥನಾರಾಯಣ ಅವರು ಪ್ರತಿಪಾದಿಸಿದರು.

ಇಂದು ಬೆಳಗ್ಗೆ ಜಿಲ್ಲಯ ಮೊದಲ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸಮೀಪದ ರಾಮದೇವರ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಪಟ್ಟಾಭಿರಾಮನ ದರ್ಶನ ಪಡೆದ ನಂತರ ಮಾತನಾಡಿದ ಅವರು, ರಾಮನನ್ನು ನಾವೆಲ್ಲರೂ ಮತ್ತೆಮತ್ತೆ ಸ್ಮರಿಸುತ್ತೇವೆ. ನಿರಂತರವಾಗಿ ಪೂಜಿಸುತ್ತೇವೆ. ಭವಿಷ್ಯದಲ್ಲಿ ಇನ್ನೆಷ್ಟೇ ತಲೆಮಾರುಗಳು ಕಳೆದರೂ ಆ ಮರ್ಯಾದಾ ಪುರುಷೋತ್ತಮನ ಆದರ್ಶ, ಮಲ್ಯಗಳು ನಮ್ಮನ್ನು ಕೈಹಿಡಿದು ಸದಾ ನಡೆಸುತ್ತಲೇ ಇರುತ್ತವೆ ಎಂದು ಹೇಳಿದರು.

ಅದೆಷ್ಟೋ ವರ್ಷಗಳಿಂದ ಇದ್ದ ಅಡ್ಡಿಗಳೆಲ್ಲ ನಿವಾರಣೆಯಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಬಿದ್ದ ಕೆಲ ದಿನಗಳಲ್ಲೇ ಈ ರಾಮಗಿರಿಯಲ್ಲಿ ಪಟ್ಟಾಭಿರಾಮನ ದರ್ಶನ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವಜನ್ಮದ ಫಲ. ಸಕಲ ಪ್ರಜೆಗಳ ಪಾಲಿನ ದೈವ ಈ ರಾಮ ಸನ್ನಿಧಿಯಿಂದ ನಾನು ನೇರವಾಗಿ ಕೆಡಿಪಿ ಸಭೆಗೆ ಹೋಗುತ್ತಿದ್ದೇನೆ. ಇಂದಿನಿಂದ ರಾಮನಗರ ಜಿಲ್ಲಾಯ ಅಭಿವೃದ್ಧಿಯಲ್ಲು ನವಶಕೆ ಆರಂಭವಾಗಲಿದೆ ಎಂದು ಡಿಸಿಎಂ ಹೇಳಿದರು.

ಜತಿ, ಧರ್ಮ ಬೇಧವಿಲ್ಲದೆ ಪ್ರತಿಯೊಬ್ಬರನ್ನು ಒಟ್ಟಿಗೆ ಕರೆದುಕೊಂಡು ಮುನ್ನಡೆಯುವುದು ನನ್ನ ಉದ್ದೇಶ. ರಾಮ ಹಾಕಿಕೊಟ್ಟ ಸನ್ಮಾರ್ಗದಲ್ಲಿಯೇ ಪ್ರಗತಿಯ ರಥಚಕ್ರಗಳು ಸಾಗಲಿವೆ. ಎಲ್ಲರ ಸಹಕಾರದಿಂದ ಜಿಲ್ಲಾಯ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂಬುದು ನನ್ನ ಇಚ್ಚೆಯಾಗಿದೆ. ಆ ಕಾರ್ಯಕ್ಕೆ ಈ ರಾಮ ಸನ್ನಿಧಿಯಿಂದಲೇ ಚಾಲನೆ ಸಿಕ್ಕಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿದರು: ಸುಮಾರು 400 ಮೆಟ್ಟಿಲುಗಳ ಎತ್ತರದ ರಾಮಗಿರಿ ಬೆಟ್ಟವನ್ನು ಅಶ್ವತ್ಥನಾರಾಯಣ ಅವರು ಎಲ್ಲಿಯೂ ನಿಲ್ಲದೇ ಕಾಲ್ನಡಿಗೆಯಲ್ಲಿಯೇ ಹತ್ತಿದರು. ಪುರಾಣ ಪ್ರಸಿದ್ಧವಾದ ಈ ತಾಣವನ್ನು ವೀಕ್ಷಿಸಿದರಲ್ಲದೆ ಅಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಬಳಿಕ ಬೆಟ್ಟದ ಮೇಲಿರುವ ಪಟ್ಟಾಭಿರಾಮ ಸ್ವಾಮಿ ಹಾಗೂ ಶಿವನಿಗೆ ಪೂಜೆ ಸಲ್ಲಿಸಿದರು.

Facebook Comments