ಕಾಲೇಜುಗಳಲ್ಲಿ ಡ್ರಗ್ಸ್ ಹಾವಳಿ ತಡೆಯಲು ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.9- ಎಂಜಿನಿಯ ರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ಡ್ರಗ್ಸ್ ಬಗ್ಗೆಯೂ ಸಾಕಷ್ಟು ಆರೋಪ ಗಳು ಬಂದಿದ್ದು, ಅದನ್ನು ತಡೆಯಲು ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್‍ನ್ನು ತಡೆಗಟ್ಟಲು ಮುಂದಾಗಿದ್ದೇವೆ. ಎಲ್ಲಾ ಕಡೆಗಳಲ್ಲೂ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ.

ಕಾಲೇಜುಗಳಲ್ಲಿ ಇದನ್ನ ತಡೆಯೋಕೆ ಪ್ರಯತ್ನಗಳ ನಡೆದಿವೆ. ಇಲ್ಲವಾದರೆ ಇದೊಂದು ಪಿಡುಗಾಗಿ ಪರಿಣಮಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.  ಡ್ರಗ್ಸ್‍ನ್ನು ರಾಜ್ಯ ಸರ್ಕಾರ ಸಂಪೂರ್ಣ ಮಟ್ಟ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ರಾಗಿಣಿ ನಮ್ಮ ಪಕ್ಷದ ಸದಸ್ಯೆಯಲ್ಲ. ಚುನಾವಣಾ ಪ್ರಚಾರದಲ್ಲಿ ಸ್ಟಾರ್ಸ್ ಭಾಗವಹಿಸುತ್ತಾರೆ. ಇದರಲ್ಲಿ ಅಂಥ ದೊಡ್ಡನೇನೂ ಇಲ್ಲ ಎಂದರು.

ಆದರೆ ರಾಗಿಣಿ ನಮ್ಮ ಪಕ್ಷದ ಸದಸ್ಯೆಯಲ್ಲ ಎಂದ ಮೇಲೆ ಅಮಾನತು ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಡ್ರಗ್ಸ್ ಕೇವಲ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ ಎಲ್ಲಾ ಕಡೆಗಳಲ್ಲೂ ಅದರ ಹಾವಳಿಯಿದೆ. ಅದನ್ನ ಸಂಪೂರ್ಣವಾಗಿ ಮಟ್ಟ ಹಾಕಬೇಕಿದೆ. ಆ ನಿಟ್ಟಿನಲ್ಲೇ ಸರ್ಕಾರ ಕೂಡ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Facebook Comments