ನಾಯಕತ್ವ ಬದಲಾವಣೆಯ ಪ್ರಶ್ನೆವೇ ಇಲ್ಲ: ಡಿಸಿಎಂ ಅಶ್ವಥ್ ನಾರಾಯಣ

ಈ ಸುದ್ದಿಯನ್ನು ಶೇರ್ ಮಾಡಿ

ಮಳವಳ್ಳಿ,ಸೆ.11- ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆ ಇಲ್ಲವೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.  ತಾಲ್ಲೂಕಿನ ಸತ್ಯಗಾಲದಿಂದ ಬಿಡದಿ, ರಾಮನಗರ, ಚನ್ನಪಟ್ಟಣಕ್ಕೆ 540 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ನೀರು ಹರಿಸುವ ಯೋಜನೆ ಕಾಮಗಾರಿಯ ಸುರಂಗ ಮಾರ್ಗವನ್ನು ನೆಟ್‍ಕಲ್ ಗ್ರಾಮದ ಬಳಿ ವೀಕ್ಷಿಸಿ ನಂತರ ಅವರು ಸುದ್ದಿಗಾರರೊಂದಗಿಎ ಮಾತನಾಡಿದರು.

ಸಚಿವ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಶೆಟ್ಟರ್ ಅವರು ಸಿಎಂ ಬದಲಾವಣೆ ಕುರಿತಾಗಿ ದೆಹಲಿಗೆ ಹೋಗಿಲ್ಲ. ಕೇಂದ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಹೋಗಿದ್ದಾರೆ ಅಷ್ಟೇ. ಬಿ.ಎಸ್.ಯಡಿಯೂರಪ್ಪನವರು ಎಂದಿಗೂ ನಮ್ಮ ನಾಯಕರು ಎಂದು ಹೇಳಿದರು.

ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಮಾಜಿ ಸಿಎಂಎ ಎಚ್.ಡಿ.ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರನ್ನು ಇಂದು ಭೇಟಿಯಾಗಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ರಾಜ್ಯದ ಅಭಿವೃದ್ಧಿ ಸಂಬಂಧ ಯಾವುದೇ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಾರೆ ಎಂದು ಉತ್ತರಿಸಿದರು.

ಡ್ರಗ್ಸ್ ವಿಚಾರದಲ್ಲಿ ಯಾರು ಎಷ್ಟೇ ದೊಡ್ಡವರಾಗಿರಲಿ, ಯಾರೇ ಆಗಿರಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಂಪೂರ್ಣವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಕಾವೇರಿ ನೀರು ಹರಿಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಯೋಜನೆಯಿಂದ ಬಿಡದಿ, ರಾಮನಗರ, ಚನ್ನಪಟ್ಟಣ ಭಾಗಗಳ ಜನರಿಗೆ ಕಾವೇರಿ ನೀರು ಸಿಗಲಿದೆ ಎಂದು ಹೇಳಿದರು. ಈ ವೇಳೆ ಉಪವಿಭಾಗಾಧಿಕಾರಿ ಶಿವರಾಜ್, ತಹಸೀಲ್ದಾರ್ ಚಂದ್ರಮೌಳಿ, ಸ್ಥಳೀಯ ಮುಖಂಡರು ಹಾಜರಿದ್ದರು.

Facebook Comments