ಕೋವಿಡ್ ರೋಗಿಗಳ ಜೊತೆ ಡಿಸಿಎಂ ಅಶ್ವತ್ಥನಾರಾಯಣ ವಿಡಿಯೊ ಸಂವಾದ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.28-ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಕೋವಿಡ್ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿ ಧೈರ್ಯ ತುಂಬಿದರು.

ಅಡ್ಮಿನ್ ಬ್ಲಾಕಿನಲ್ಲಿ ಕೂತು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು‌ ರೋಗಿಗಳ ಜತೆ ಮಾತನಾಡಿದ ಅವರು, ರೋಗಕ್ಕೆ ಹೆದರಬೇಡಿ. ನಿಮಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ಸರಕಾರ ನಿಮ್ಮೊಂದಿಗಿದೆ ಎಂದು ಧೈರ್ಯ ತುಂಬಿದರು.

ಕನಕಪುರದ ರೋಗಿಯೊಬ್ಬರು 7 ತಿಂಗಳ ಗರ್ಭಿಣಿಯಾಗಿದ್ದು, ತಮಗಿಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯುತ್ತಿದೆ. ವೈದ್ಯರು ಮತ್ತು ನರ್ಸ್ ಗಳು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆಂದು ಡಿಸಿಎಂ ಅವರಿಗೆ ತಿಳಿಸಿದರು.

ಹಾಗೆಯೇ ಮತ್ತೊಬ್ಬ ರೋಗಿ ಕೂಡ ಚಿಕಿತ್ಸೆಯ ಬಗ್ಗೆ ಸಂತಸ ವ್ಕಕ್ತಪಡಿಸಿದರಲ್ಲದೆ, ತಮ್ಮ ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿದರು.
ಇದೊಂದು ಸೋಂಕಿನ ಕಾಯಿಲೆಯಾಗಿದ್ದು, ಗಂಭೀರವಾಗಿದೆ.

ಯಾವುದೇ ಕಾರಣಕ್ಕೂ ಎದೆಗುಂದಬಾರದು. ವೈದ್ಯರು ಹೇಳುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಆಸ್ಪತ್ರೆಯಿಂದ ಬಿಡುಗಡೆಯಾದ ಮೇಲೆ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉಪ ಮುಖ್ಯಮಂತ್ರಿ ಹಿತವಚನ ಹೇಳಿದರು.

Facebook Comments

Sri Raghav

Admin