ಸಿಡಿ ಪ್ರಕರಣದ ಹಿಂದೆ ಷಡ್ಯಂತ್ರ ಇದೆ : ಡಿಸಿಎಂ ಅಶ್ವತ್ಥನಾರಾಯಣ್

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಮಾ.3- ಸಚಿವ ರಮೇಶ್ ಜಾರಕಿ ಹೊಳಿ ಸಿಡಿ ಪ್ರಕರಣದ ಹಿಂದೆ ಷಡ್ಯಂತ್ರ ಇದೆ. ಹಾಗಾಗಿ ರಮೇಶ್ ಜಾರಕಿಹೊಳಿಯ ರಾಜೀನಾಮೆ ಪ್ರಶ್ನೆ ಉದ್ಭವಿಸದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಹೇಳಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದುರುದ್ದೇಶಪೂರ್ವಕವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಮೇಲ್ನೋಟಕ್ಕೆ ಇದು ಸತ್ಯಕ್ಕೆ ದೂರವಾದ ಘಟನೆ ಎಂದು ಅನಿಸುತ್ತಿದೆ ಎಂದರು.

ಘಟನೆ ಕುರಿತು ತನಿಖೆ ನಡೆದ ನಂತರವಷ್ಟೇ ನಿಜ ಹೊರಬರಲು ಸಾಧ್ಯ. ಹಾಗಾಗಿ ರಮೇಶ್ ಜಾರಕಿ ಹೊಳಿಯ ರಾಜೀನಾಮೆ ಪ್ರಶ್ನೆ ಉದ್ಭವಿಸದು. ಪ್ರಕರಣದ ಕುರಿತು ಪಕ್ಷದ ವರಿಷ್ಠರು ಗಮನ ಹರಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಗೆಲುವು ನಮ್ಮದೇ: ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಉಪ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಸಲಿದೆ ಎಂದರು. ವರದಿ ನಂತರ ಕ್ರಮ: ಮೀಸಲಾತಿ ವಿಷಯದಲ್ಲಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದ್ದು, ವರದಿ ಬಂದ ನಂತರ ಕ್ರಮ ಜರುಗಿಸಲಿದೆ.

ಯಾವ ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂದು ತೀರ್ಮಾನಿಸಲಿದೆ. ಒಕ್ಕಲಿಗರೂ ಸೇರಿದಂತೆ ಎಲ್ಲ ಸಮುದಾಯದ ಹಿಂದುಳಿದವರಿಗೆ ಮೀಸಲಾತಿ ಸಿಗಬೇಕಿದೆ ಎಂದು ಹೇಳಿದರು.

Facebook Comments

Sri Raghav

Admin