ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ : ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ ನಾರಾಯಣ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಶ್ವತ್ ನಾರಾಯಣ್ ಅವರು ಇಂದು ಇಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯತ್ ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಮತ್ತು ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಭೂ ಸಮಸ್ಯೆಗೆ ಶೀಘ್ರ ಪರಿಹಾರ ಕೈಗೊಳ್ಳುವಂತೆ ಸೂಚನೆ ನೀಡಿದರು.

ಬೆಂಗಳೂರಿನ ಕೆಮಿಕಲ್ ಯುಕ್ತ ನೀರು ಬೈರಮಂಗಲ ಕೆರೆಗೆ ಸೇರಿ ನೀರು ಕಲುಷಿತಗೊಂಡು ಸಾವ9ಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದನ್ನು ಗಮನಕ್ಕೆ ತೆಗೆದುಕೊಂಡು ಬೈರಮಂಗಲ ಕೆರೆಗೆ ಸೇರುವ ನೀರನ್ನು ಶುದ್ಧೀಕರಿಸುವ ಘಟಕಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ವೈದ್ಯರುಗಳಿಗೆ ಕ್ವಾಟ್ರಸ್ ವ್ಯವಸ್ಥೆ, ತುತು9 ಚಿಕಿತ್ಸೆಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜನೌಷಧಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲೂ ಮಳಿಗೆ ತೆರೆಯಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೈರಮಂಗಲ ಕೆರೆ ಕಲುಷಿತಗೊಂಡಿದ್ದು ಬೆಂಗಳೂರಿನಿಂದ ಬರುವ ಕಲುಷಿತ ನೀರನ್ನು ಶುಧ್ಧೀಕರಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 2ಲಕ್ಷಕ್ಕೂ ಅಧಿಕ ಆಯುಷ್ಮಾನ್ ಭಾರತ್ ಕಾಡ್9ಗಳನ್ನು ನೀಡಲಾಗಿದ್ದು ಜಿಲ್ಲೆಯ ಸಮಸ್ತ ಜನತೆಗೆ ಈ ಸೇವೆಯನ್ನು ತಲುಪಿಸಲು ಬೇಕಾದ ಎಲ್ಲಾ ರೀತಿಯ ಕ್ರಮ ಕೈಗೊಂಡು ಕಾಯ9ಗತವಾಗುವಂತೆ ಆರೋಗ್ಯಾಧಿಕಾರಿಗಳಿಗೆ ಹೇಳಿದರು.

ಕೃಷಿಯಲ್ಲಿ ಪ್ರಗತಿ ಸಾಧಿಸಲು ಉತ್ತಮ ಫಲವತ್ತತೆಯ ಬೆಳೆ ಬೆಳೆಯಲು 16749 ಮೆಟ್ರಿಕ್ ಟನ್ ನಷ್ಟು ರಸಗೊಬ್ಬರ ವಿತರಣೆಯಾಗಿದೆ, ಯೂರಿಯಾ ಸರಬರಾಜಿನಲ್ಲಿ ಸಮಸ್ಯೆ ಆಗಿತ್ತು, ವಿತರಣೆ ಪ್ರಗತಿಯಲ್ಲಿದೆ ಎಂದು ಕೃಷಿ ಇಲಾಖಾ ಅಧಿಕಾರಿಗಳು ತಿಳಿಸಿದರು. ರೈತರು ಕೃಷಿಹೊಂಡಗಳನ್ನು ನಿಮಿ9ಸುತ್ತಿರುವುದು ಕೇವಲ ಟಾಪ9ಲ್ ಖರೀದಿಗಾಗಿ ಮಾತ್ರ ಎಂಬ ಆರೋಪಕ್ಕೆ ರೈತರು ಕೃಷಿಹೊಂಡಗಳನ್ನು ಸಮಪ9ಕವಾಗಿ ಬಳಸಿಕೊಳ್ಳುತ್ತಿರುವುದಾಗಿ ಆ ರೀತಿಯ ಯಾವುದೇ ದುರುಪಯೋಗವಾಗಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ 200ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದ್ದು, ರೈತರಿಗೆ ನೇರ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸಕಾ9ರದ ಶುದ್ಧ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟ ಪರಿಶೀಲನೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿ, ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲಿರುವ ಟ್ರಸ್ಟ್ ಗಳ ನಾಮಫಲಕಗಳ ತೆರವಿಗೆ ಕ್ರಮ ಕೈಗೊಳ್ಳಿ ಎಂದರು. ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವುದು ಹಷ9 ವ್ಯಕ್ತಪಡಿಸಿ, ಈ ಬಾರಿ ಮೊದಲನೇ ಸ್ಥಾನವನ್ನು ಹೊಂದಲು ಬೇಕಾದ ಸೂಕ್ತ ಕ್ರಮ ಅನುಸರಿಸಸುವಂತೆ ಹೇಳಿದರು. ವಿವಿಧ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ ಭದ್ರತೆಗೆ ಕ್ರಮವಹಿಸಿ, ಸಿ. ಸಿ. ಟಿವಿ ಅಳವಡಿಸುವಂತೆ ತಿಳಿಸಿದರು.

ವಿವಿಧ ಯೋಜನೆಗಳಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರಿಗೆ ಸರಿಯಾದ ಸಮಯಕ್ಕೆ ಪಿಂಚಣಿ ತಲುಪುತ್ತಿಲ್ಲ, ಈ ಕುರಿತು ಶೀಘ್ರ ಕ್ರಮಕೈಗೊಂಡು, ಪಿಂಚಣಿದಾರರಿಗೆ ಪಿಂಚಣಿ ತಲುಪಿಸುವ ಕಾಯ9ಮಾಡಿ ಎಂದರು. ಕೆರೆ ಒತ್ತುವರಿಗೆ ಸಂಬಂಧಿಸಿದಂತೆ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ನೀಡುವಂತೆ ತಿಳಿಸಿ, ಒತ್ತುವರಿ ಮಾಡಿಕೊಂಡವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾಯ9ದಶಿ9 ರಶ್ಮಿ. ವಿ.ಮಹೇಶ್, ಜಿಲ್ಲಾ ಪಂಚಾಯತ್ ನ ಅಧ್ಯಕ್ಷರಾದ ಹೆಚ್.ಬಸಪ್ಪ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾಯ9ನಿವ9ಹಣಾಧಿಕಾರಿ ಜಯವಿಭವಸ್ವಾಮಿ, ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷರಾದ ವೀಣಾಕುಮಾರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin