‘ಡಿಸಿಎಂಗಳನ್ನು ಕೈ ಬಿಡುವ ವಿಚಾರ ಕುರಿತು ಯಾವುದೇ ರೀತಿ ಚರ್ಚೆಯಾಗಿಲ್ಲ’ : ಕಾರಜೋಳ

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ, ಜ.14- ಸಚಿವ ಸಂಪುಟ ಪುನಾರಾಚನೆ ಸಂದರ್ಭದಲ್ಲಿ ಮೂವರು ಡಿಸಿಎಂಗಳನ್ನು ಕೈ ಬಿಡುವ ವಿಚಾರ ಸರ್ಕಾರದ ಮಟ್ಟದಲ್ಲಿ ಯಾವುದೇ ರೀತಿ ಚರ್ಚೆಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಡಿಸಿಎಂಗಳನ್ನು ನೇಮಕ ಮಾಡುವುದು, ಕೈ ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ಸಂಪುಟ ಪುನಾರಾಚನೆ ಸಂದರ್ಭದಲ್ಲಿ ಹಾಲಿ ಡಿಸಿಎಂಗಳನ್ನು ಕೈ ಬಿಡುವ ವಿಚಾರ ಚರ್ಚೆಯಾಗಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.ಮಕರ ಸಂಕ್ರಾಂತಿ ಹಬ್ಬದ ನಂತರ ನೂತನ ಶಾಸಕರಿಗೆ ಸಿಹಿ ಸುದ್ದಿ ಸಿಗಲಿದೆ. ನೂತನ ಶಾಸಕರು ಸಚಿವ ಸ್ಥಾನ ಪಡೆಯುವುದು ಪಕ್ಕಾ ಎಂದು ತಿಳಿಸಿದರು.

ನೀಲಿ ಚಿತ್ರ ನೋಡುವವರಿಂದ ನಾನು ಪಾಠ ಕಲಿಯಬೇಕಾಗಿಲ್ಲ ಎಂದು ಸಿದ್ದರಾಮಯ್ಯ, ಲಕ್ಷ್ಮಣ ಸವದಿ ಅವರ ಕುರಿತು ನೀಡಿರುವ ಹೇಳಿಕೆ ಸಂಬಂಧ ನಾನು ಯಾವುದೇ ರೀತಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಎಸ್ಸಿ-ಎಸ್ಟಿ ಅನುದಾನ ಬಳಕೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆ ಜಾರಿಯಾಗಿತ್ತು. 8500 ಕೋಟಿ ರೂ.ಗಳಲ್ಲಿ ಕೇವಲ 3500 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.ಸಮರ್ಪಕವಾಗಿ ಅನುದಾನ ಬಳಸದಿದ್ದರೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Facebook Comments

Sri Raghav

Admin