‘ಭವಿಷ್ಯದಲ್ಲಿ ಕಾಂಗ್ರೆಸ್ ವಾರಸುದಾರರಿಲ್ಲದ ಮನೆಯಂತಾಗಲಿದೆ’

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಅ.27- ದೇಶದಲ್ಲಿ ಸುಮಾರು 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಮುಂಬರುವ ದಿನಗಳಲ್ಲಿ ವಾರಸುದಾರರಿಲ್ಲದ ಮನೆಯಂತಾಗಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.  ಶಿರಾ ಉಪಚುನಾವಣೆ ಮತ್ತು ಆಗ್ನೇಯ ಪದವಿಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ.

ಈಗಾಗಲೇ ಕಾಂಗ್ರೆಸ್ ಅಳಿವಿನಂಚಿಗೆ ತಲುಪಿದ್ದು, ಯಜಮಾನರಿಲ್ಲದ ಮನೆಯಂತಾಗಲಿದೆ. ಕಾಂಗ್ರೆಸ್ ಪಕ್ಷದ ವರ್ತನೆಯಿಂದಾಗಿ ದೀನ ದಲಿತರು ಬೇಸತ್ತಿದ್ದು, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಿ ನರೇಂದ್ರಮೋದಿ ಅವರ ಕೈ ಬಲಪಡಿಸಿದ್ದಾರೆ ಎಂದರು. ನಾಳೆ ನಡೆಯಲಿರುವ ಆಗ್ನೇಯ ಪಧವೀದರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.

ರಾಜ್ಯದಲ್ಲಿ ಒಂದು ವರ್ಷ 2 ತಿಂಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಅಂದಿನಿಂದ ಪ್ರವಾಹ, ಮಳೆ ಹಾನಿ, ಕೊರೊನಾದಂತಹ ಸಂಕಷ್ಟಗಳು ಎದುರಾಗಿದ್ದರೂ ಯಡಿಯೂರಪ್ಪನವರು ಯಾವುದಕ್ಕೂ ಎದೆಗುಂದದೆ ಉತ್ತಮವಾಗಿ ಆಡಳಿತ ನಡೆಸುತ್ತಿz್ದÁರೆ. ಹಾಗಾಗಿ ದೇಶದ ಸುರಕ್ಷತೆ, ಐಕ್ಯತೆ ಹಾಗೂ ಭದ್ರತೆಗಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದು ಗೋವಿಂದ ಕಾರಜೋಳ ಮನವಿ ಮಾಡಿದರು.

ಸಿರಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತದಾರರಿದ್ದು, ಕಳೆದ 70 ವರ್ಷದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೇ ಗೆದ್ದು ಆಡಳಿತ ನಡೆಸಿವೆ. ಈ ಎರಡು ಪಕ್ಷಗಳು ಸಿರಾದಲ್ಲಿ ಅಭಿವೃದ್ಧಿ ಮಾಡಿಲ್ಲ. ಶೇ.50ರಷ್ಟು ಹಳ್ಳಿಗಳಿಗೆ ರಸ್ತೆಯೇ ಇಲ್ಲ, ಕುಡಿಯುವ ನೀರಿಲ್ಲ, ಸಮರ್ಪಕ ಬೀದಿ ದೀಪಗಳು ಸೇರಿದಂತೆ ಮೂಲಭೂತ ಸೌಕರ್ಯವನ್ನೇ ಕಲ್ಪಿಸಿಲ್ಲ ಎಂದು ದೂರಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇದೇ ತಿಂಗಳ 30 ರಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ನಾಳೆ ನಳಿನ್‍ಕುಮಾರ್ ಕಟೀಲ್ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಜಿ.ಎಸ್. ಬಸವರಾಜು,ಶಾಸಕ ಜ್ಯೋತಿ ಗಣೇಶ್, ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಚಿದಾನಂದಗೌಡ ಮತ್ತಿತರರು ಉಪಸ್ಥಿತರಿದ್ದರು.

Facebook Comments