ಲೋಕೋಪಯೋಗಿ ಇಲಾಖೆಯು ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಲೋಕೋಪಯೋಗಿ ಇಲಾಖೆಯು ಈ ವರ್ಷ ಅನುಷ್ಟಾನಗೊಳಿಸಲಿರುವ ಮುಂದುವರೆದ ಹಾಗೂ ಹೊಸ ಯೋಜನೆಗಳನ್ನು ಕಡ್ಡಾಯವಾಗಿ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಬೇಕು ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದರು.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆರ್ಥಿಕ ಇಲಾಖೆಯು ಹೊರಡಿಸಿದ ಮುಂದುವರೆದ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸುವ ಬಗ್ಗೆ ಸುತ್ತೋಲೆ ಹೊರಡಿಸಿದ್ದು,

ಅದರಂತೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಕೈಗೊಳ್ಳಬೇಕಾದ ಅತೀ ಪ್ರಾಮುಖ್ಯವಾದ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಮುಂದುರೆಸುವ ಬಗ್ಗೆ ಆದ್ಯತಾ ಪಟ್ಟಿಯನ್ನು ತಯಾರಿಸಿ, ಇವುಗಳನ್ನು ಕೈಗೊಳ್ಳಲು ಪ್ರತ್ಯೇಕವಾಗಿ ಕಡತಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಕಳುಹಿಸಿ, ಅನುಮೋದನೆ ಪಡೆದ ನಂತರವೇ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್ ಹಾಗೂ ಎಲ್ಲಾ ನಿಗಮ, ವಲಯ, ಘಟಕಗಳ ಮುಖ್ಯಸ್ಥರು ಹಾಜರಿದ್ದು, ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

Facebook Comments

Sri Raghav

Admin