‘ನೆರೆ ಪೀಡಿತ ಪ್ರದೇಶಗಳ ರಸ್ತೆ, ಸೇತುವೆ ನಿರ್ಮಾಣಕ್ಕೆ 500 ಕೋಟಿ ರೂ. ಮೀಸಲು’

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಆ.31- ನಿರಾಶ್ರಿತರ ರಕ್ಷಣೆ, ಹಾಳಾದ ಸೇತುವೆ, ರಸ್ತೆ ನಿರ್ಮಾಣ ಮಾಡಲು ಮೊದಲು ಆದ್ಯತೆ ನೀಡಲಾಗಿದ್ದು ಅದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು ನಿರಾಶ್ರಿತರ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು.

ಸಂಪರ್ಕ ರಸ್ತೆಗಳ ದುರಸ್ತಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದೇನೆ. ಇಲ್ಲಿ ಆಗಿರುವ ನೆರೆ ಹಾನಿ, ರಸ್ತೆ, ಸೇತುವೆ ಹಾಳಾದ ಬಗ್ಗೆ ಪರಿಶೀಲನೆ ನಡೆಸಿ ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳುತ್ತೇನೆ.

ಎರಡು ದಿನಗಳ ಕಾಲ ಬಾಗಲಕೋಟೆಯಲ್ಲಿಯೇ ಇದ್ದು, ನಂತರ ಮೈಸೂರು, ಮಂಗಳೂರು, ಕೊಡಗು ಜಿಲ್ಲೆಯ ಪ್ರವಾಸ ನಡೆಸಿ ಮಳೆ ಹಾನಿಯಿಂದಾದ ಪರಿಣಾಮಗಳ ಕುರಿತು ಚರ್ಚೆ ನಡೆಸಿ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸೆ.7ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲಿದ್ದಾರೆ.

ಈಗಾಗಲೇ ಕೇಂದ್ರ ತಂಡ ಅಧ್ಯಯನ ನಡೆಸಿದೆ. ಶೀಘ್ರವೇ ಪರಿಹಾರ ಬಿಡುಗಡೆಯಾಗಲಿದೆ ಎಂದು ಹೇಳಿದ ಅವರು, ಆದ್ಯತೆಗೆ ಅನುಸಾರವಾಗಿ ಪರಿಹಾರ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಪ್ರತಿಕ್ರಿಯೆ ನಕಾರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಲು ಉಪ ಮುಖ್ಯಮಂತ್ರಿಗಳು ನಕಾರ ವ್ಯಕ್ತಪಡಿಸಿದರು. ಈಗಾಗಲೇ ಅವರ ವಿಚಾರಣೆ ನಡೆದಿದ್ದು ಈಗಲೇ ಏನೂ ಹೇಳುವುದಿಲ್ಲ ಎಂದು ತಿಳಿಸಿದರು.

Facebook Comments