ಮಳೆ ನೀರು ಸಂಗ್ರಹಿಸಲು ಸರ್ಕಾರಿ ಕಟ್ಟಡಗಳ ಛಾವಣಿಗೆ ಹೊಸ ವಿನ್ಯಾಸ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.4- ಮಳೆ ನೀರು ಸೋರಿಕೆಯಾಗುವುದನ್ನು ತಡೆಗಟ್ಟಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪವನ್ನು ಬದಲಾಗಿಸಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆ ತಿಳಿಸಿದರು.  ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹರತಾಳ್ ಹಾಲಪ್ಪ ಅವರು ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಗೆ ಮನವಿ ಮಾಡಿದರು.

ಈ ವೇಳೆ ಸಭಾಧ್ಯಕ್ಷ ಕಾಗೇರಿ ಅವರು, ಮಲೆನಾಡಿನ ಭಾಗಗಳಲ್ಲಿ ಇದು ದೊಡ್ಡ ಸಮಸ್ಯೆಯಾಗಿದೆ. ಮಳೆಗಾಲ ಆರಂಭವಾದರೆ ಸರ್ಕಾರಿ ಕಟ್ಟಡಗಳಲ್ಲಿ ನೀರು ಸೋರಿಕೆಯಾಗುತ್ತದೆ. ಇದಕ್ಕೆ ಒಂದು ಪರಿಹಾರ ಕಲ್ಪಿಸಬೇಕೆಂದು ಸದನದಲ್ಲಿದ್ದ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾರಜೋಳ ಅವರು, ಇನ್ನು ಮುಂದೆ ಸರ್ಕಾರಿ ಕಟ್ಟಡಗಳ ವಿನ್ಯಾಸ ಹಾಗೂ ಛಾವಣಿ ಸ್ವರೂಪವನ್ನು ಬದಲಾವಣೆ ಮಾಡುವಂತೆ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗುವುದು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳನ್ನು ಪೂರ್ಣಗೊಳಿಸಿದವರು ಕಡ್ಡಾಯವಾಗಿ ಒಂದು ವರ್ಷ ಸೇವೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಈಗಾಗಲೇ 280 ಜನ ಸ್ನಾತಕೋತ್ತರ ಪದವೀಧರರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

Facebook Comments