ಹೈದರಾಬಾದ್‍ ಎನ್‍ಕೌಂಟರ್ ಬಗ್ಗೆ ಡಿಸಿಎಂ ಕಾರಜೋಳ ಹೇಳಿದ್ದೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.6- ಹೈದರಾಬಾದ್‍ನಲ್ಲಿ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿರುವುದು ಅತ್ಯಾಚಾರಿಗಳಿಗೆ ಒಂದು ಪಾಠವಾಗಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.  ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗವಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಕಾನೂನು ಪ್ರಕಾರವೇ ಹೈದರಾಬಾದ್ಲೀಪೊಸರು ಕ್ರಮ ಕೈಗೊಂಡಿದ್ದಾರೆ. ತಾವು ಮಾಧ್ಯಮಗಳಲ್ಲಿ ಗಮನಿಸಿದಂತೆ ಆರೋಪಿಗಳು ಪೊಲೀಸರ ಮೇಲೆ ತಿರುಗಿ ಬಿದ್ದಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಅತ್ಯಾಚಾರಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಸ್ವಾಗತ: ಕೇಂದ್ರ ಸರ್ಕಾರವು ದಲಿತರಿಗೆ ಇನ್ನೂ 10 ವರ್ಷಗಳ ಕಾಲ ಮೀಸಲಾತಿ ಮುಂದುವರಿಸುವ ನಿರ್ಧಾರ ಕೈಗೊಂಡಿರುವುದನ್ನು ಸ್ವಾಗತಿಸಲಾಗುವುದು. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸಿಗುತ್ತಿರುವ ಸೌಲಭ್ಯಗಳು ಮುಂದುವರಿಯುತ್ತವೆ ಎಂದರು.

ನಿನ್ನೆ ವಿಧಾನಸಭೆ ಉಪಚುನಾವಣೆ ಶಾಂತಿಯುತವಾಗಿ ಮತದಾನ ನಡೆದಿದೆ. ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ಕಡೆ ಶೇ.70ಕ್ಕಿಂತಲೂ ಹೆಚ್ಚು ಮತದಾನವಾಗಿದೆ. ಸಿ ವೋಟರ್ಸ್ ಸಮೀಕ್ಷೆ ಸತ್ಯಕ್ಕೆ ಹತ್ತಿರವಾಗಿದೆ. ಬಿಜೆಪಿ 15 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಒಂದೆರಡು ಕ್ಷೇತ್ರಗಳಲ್ಲಿ ಸ್ವಲ್ಪ ಹೆಚ್ಚುಕಡಿಮೆ ಆಗಿರಬಹುದು. ಹಾಗಾಗಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Facebook Comments