ತೊಗರಿ ಬೆಳೆಯ ಬೆಂಬಲ ಬೆಲೆ ನಿಗದಿಗೆ ಶೀಘ್ರ ಕ್ರಮ : ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಡಿ.12- ತೊಗರಿ ಬೆಳೆ ಬೆಂಬಲ ಬೆಲೆ ನಿಗದಿ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರವಾಗಿ ನಿರ್ಧರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದಕಾರಜೋಳ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ತೊಗರಿ ಬೆಳೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ.

ರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಲಾಗುವುದು. ಬೆಂಬಲ ಬೆಲೆಯಿಂದ ರೈತರಿಗೆ ನಷ್ಟವಾದರೆ ರಾಜ್ಯಸರ್ಕಾರವು ಪ್ರೋತ್ಸಾಹ ಧನವನ್ನು ನೀಡಲಿದೆ ಎಂದು ಭರವಸೆ ನೀಡಿದರು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುವುದು. ಸಾಹಿತ್ಯ ಸಮ್ಮೇಳನವು ಅಪರೂಪದ ಕಾರ್ಯಕ್ರಮವಾಗಿದೆ. ಇದು ಕನ್ನಡ ಸಾಹಿತ್ಯ ಜಾತ್ರೆಯಾಗಿದ್ದು, ಇದು ಕನ್ನಡ ಭಾಷೆ ಉಳಿಸಿ ಬೆಳೆಸಲು ಪ್ರೋತ್ಸಾಹಿಸುವ ಕಾರ್ಯಕ್ರಮವಾಗಿದೆ. ಕನ್ನಡ ಪರವಾಗಿ ಪಾರದರ್ಶಕವಾಗಿ ಆಚರಿಸಲು ಕ್ರಮಕೈಗೊಳ್ಳ ಲಾಗುವುದು ಎಂದು ಹೇಳಿದರು.

ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿ, ಉಪಸಮಿತಿಗಳನ್ನು ರಚಿಸಿ, ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಸೂಚಿಸಲಾಗುವುದು. ವಿಶೇಷ ಮುತುವರ್ಜಿಯಿಂದ ಆಚರಿಸಲಾಗುವುದು ಎಂದ ಅವರು, ಈ ಹಿಂದೆ ತಮ್ಮ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಮ್ಮೇಳನವು ಯಶಸ್ವಿಯಾಗಿ ನಡೆÀದು, ಇತಿಹಾಸದಲ್ಲಿ ದಾಖಲೆಯಾಗಿದೆ ಎಂದು ಸ್ಮರಿಸಿದರು.

Facebook Comments