ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ : ಮಹಾರಾಷ್ಟ್ರಕ್ಕೆ ಡಿಸಿಎಂ ಸವದಿ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.28- ಮುಂಬೈ ಅನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮಂಬೈ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಅದನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ. ಅಥಣಿ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಆಯ್ಕೆಯಾಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿಯೂ ಇದೆ. ನಾವು ಮುಂಬೈ ಅನ್ನು ಕರ್ನಾಟಕದ ಭಾಗವೆಂದು ಪರಿಗಣಿಸಿದ್ದೇವೆ.

ಹೀಗಾಗಿ ಮುಂಬೈ ಅನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸುವುದಾಗಿಯೂ ಹೇಳಿದರು.

Facebook Comments