ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಾಲ ಬಿಚ್ಚಿದರೆ ಹುಷಾರ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.31-ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಾಲ ಬಿಚ್ಚಿದರೆ ಹುಷಾರ್…ಇದು ಪೂರ್ವ ವಿಭಾಗದ ಪೊಲೀಸರು ರೌಡಿಗಳಿಗೆ ನೀಡಿರುವ ಖಡಕ್ ಎಚ್ಚರಿಕೆ. ಡಿಸಿಪಿ ಡಾ.ಶರಣಪ್ಪ ಮಾರ್ಗದರ್ಶನದಲ್ಲಿ ನಿನ್ನೆ ರಾತ್ರಿ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ಇನ್ಸ್‍ಪೆಕ್ಟರ್‍ಗಳು ತಮ್ಮ ವ್ಯಾಪ್ತಿಯಲ್ಲಿರುವ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಈ ಎಚ್ಚರಿಕೆ ನೀಡಿದ್ದಾರೆ.

ರೌಡಿಗಳನ್ನು ಮನೆಯಿಂದ ಹೊರ ಕರೆದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮನೆಯಲ್ಲಿ ಇರಬೇಕು. ಬೀದಿಗೆ ಬಂದು ಬಾಲ ಬಿಚ್ಚಿದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ. ಹೀಗಾಗಿ ನಿಮ್ಮ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿ ಹೋಗಿದ್ದಾರೆ.

ಮೊನ್ನೆ ಪಶ್ಚಿಮ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿ ಎಚ್ಚರಿಕೆ ನೀಡಿದ್ದರು.

Facebook Comments