ಕೆಜಿಹಳ್ಳಿ-ಡಿಜೆಹಳ್ಳಿ ಪರಿಸ್ಥಿತಿ ಈಗ ಸಂಪೂರ್ಣ ಶಾಂತಿಯುತವಾಗಿದೆ : ಡಿಸಿಪಿ ಡಾ.ಶರಣಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.15- ಕೆಜಿಹಳ್ಳಿ, ಡಿಜೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿನ ಪ್ರದೇಶಗಳಲ್ಲಿ ಈಗ ಪರಿಸ್ಥಿತಿ ಸಂಪೂರ್ಣ ಶಾಂತಿಯುತವಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ 11ರಂದು ರಾತ್ರಿ ನಡೆದ ಗಲಭೆ ಹೊರತುಪಡಿಸಿದರೆ ಯಾವುದೇ ಸಣ್ಣಪುಟ್ಟ ಘಟನೆಗಳೂ ಸಹ ನಡೆದಿಲ್ಲ ಎಂದು ಅವರು ಹೇಳಿದರು.

ಈ ಎರಡೂ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ನಾಳೆ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಸಿಎಆರ್, ಕೆಎಸ್‍ಆರ್‍ಪಿ ತುಕಡಿಗಳು ಅಲ್ಲದೆ ಮೂರು ಕಂಪನಿ ಅರೆಸೇನಾ ಪಡೆಗಳನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ.

ಎರಡೂ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ. ಗಲಭೆಯಲ್ಲಿ ಪಾಲ್ಗೊಂಡು ಪರಾರಿಯಾಗಿರುವವರ ಬಂಸುವ ಕಾರ್ಯ ಮುಂದುವರೆದಿದೆ ಎಂದು ಅವರು ತಿಳಿಸಿದರು.

ಧೈರ್ಯ ತುಂಬಿದ ಡಿಸಿಪಿ: ಡಿಜೆಹಳ್ಳಿ ಪೊಲೀಸ್ ಠಾಣೆ ಮುಂಭಾಗ ಇಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಪಿ ಡಾ.ಶರಣಪ್ಪ ಅವರು, ಹಿರಿಯ ಹಾಗೂ ಕಿರಿಯ ಅಕಾರಿಗಳಿಗೆ ಧೈರ್ಯ ತುಂಬಿದರು.

Facebook Comments

Sri Raghav

Admin