ನೇಪಾಳದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ 160 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಕಠ್ಮಂಡು, ಜು.25- ಹಿಮಾಲಯ ರಾಷ್ಟ್ರ ನೇಪಾಳದ ವಿವಿಧೆಡೆ ಭಾರೀ ಮಳೆ ಮತ್ತು ಭೂಕುಸಿತಗಳಿಂದ ಮೃತಪಟ್ಟವರ ಸಂಖ್ಯೆ 160ಕ್ಕೇರಿದೆ. ಪ್ರಕೃತಿ ವಿಕೋಪದಲ್ಲಿ ಅನೇಕರು ತೀವ್ರ ಗಾಯಗೊಂಡಿದ್ದು, ಕೆಲವರು ನಾಪತ್ತೆಯಾಗಿದ್ದಾರೆ.

ರಾಜಧಾನಿ ಕಠ್ಮಂಡು ಹೊರವಲಯ, ನಾಗರ್‍ಕೋಟ್, ಭಕ್ತಾಪುರ್, ಫೋಕರಾ, ಚಿಟ್‍ವಾನ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತಗಳಿಂದ ಈವರೆಗೆ 160ಕ್ಕೂ ಹೆಚ್ಚು ಸಾವಿಗೀಡಾಗಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೇಪಾಳದ ಪರ್ವತಮಯ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಭೂಕುಸಿತಗಳಿಂದ ಸಾವು-ನೋವು ಮತ್ತು ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ಈ ದುರ್ಘಟನೆಗಳಲ್ಲಿ ಅನೇಕರು ಕಣ್ಮರೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ತ್ರಿಶೂಲಿ ನದಿ ಸೇರಿದಂತೆ ಅನೇಕ ನದಿಗಳು ಮತ್ತು ಉಪ ನದಿಗಳು ಪ್ರವಾಹದಿಂದ ಭೋರ್ಗರೆಯುತ್ತಿದ್ದು, ಸಹಸ್ರಾರು ಹೆಕ್ಟೇರ್ ಪ್ರದೇಶಗಳು ಜಲಾವೃತವಾಗಿದ್ದು, ಕೃಷಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ.

ಭಾರತ-ನೇಪಾಳ ಗಡಿ ಪ್ರದೇಶದಲ್ಲೂ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತಗಳಿಂದ ಸಾವು-ನೋವು ಸಂಭವಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆಳು ಸಮರೋಪಾದಿಯಲ್ಲಿ ಮುಂದುವರಿದಿವೆ.

Facebook Comments

Sri Raghav

Admin