ಜಿಂಕೆಗೆ ಡಿಕ್ಕಿ ಹೊಡೆದ ಬೈಕ್, ಜಿಂಕೆ ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ನೆಲಮಂಗಲ, ಜ.14-ಅತಿ ವೇಗವಾಗಿ ಬಂದ ಬೈಕ್ ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ಪಗೊಂಡನಹಳ್ಳಿ ನಿವಾಸಿ ಹರೀಶ್(21) ಮೃತಪಟ್ಟ ಬೈಕ್ ಸವಾರ.

ಇಂದು ಬೆಳಗ್ಗೆ 7 ಗಂಟೆಗೆ ಈತ ತನ್ನ ಸಹೋದರಿಯನ್ನು ಹೋಬಳಾಪುರದ ಬಸ್ ನಿಲ್ದಾಣದಲ್ಲಿ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದಾಗ ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ 7 ವರ್ಷದ ಜಿಂಕೆ ಮತ್ತು ಹರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿದ ಕೂಡಲೇ ಪಿಎಸ್‍ಐ ಕೃಷ್ಣಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments