ಮತ್ತೆ ಹೆಚ್ಚುತ್ತಿದೆ ಕೊರೋನಾ, ಶಾಲಾ-ಕಾಲೇಜುಗಳು ಆರಂಭ ಮತ್ತಷ್ಟು ವಿಳಂಬ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.1-ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಆರಂಭವಾಗುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.

ಅಲ್ಲದೆ, ಅಕ್ಕಪಕ್ಕದ ರಾಜ್ಯಗಳಲ್ಲೂ ಕೂಡ ಕೊರೊನಾ ಪ್ರಕರಣಗಳು ಹೆಚ್ಚಾಗಿ ಲಾಕ್‍ಡೌನ್ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗುವುದು ವಿಳಂಬವಾಗುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಇನ್ನೂ ರಚನೆಯಾಗಿಲ್ಲ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಹೊಸ ಸಚಿವರು ಬರಬೇಕು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸದ್ಯ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕಡಿಮೆ. ಶಿಕ್ಷಣ ಇಲಾಖೆಗೆ ಹೊಸ ಸಚಿವರು ಬಂದ ಮೇಲೆ ಆರಂಭದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಪಿಯು ಕಾಲೇಜುಗಳನ್ನು ಆರಂಭಿಸಲು ಸರ್ಕಾರಕ್ಕೆ ವರದಿ ನೀಡಿದೆ. ಇದಕ್ಕೂ ಮುನ್ನ ಶಿಕ್ಷಕರು ಮತ್ತು ಪೆÇೀಷಕರು ಶಿಕ್ಷಣ ತಜ್ಞರ ಸಲಹೆ ಪಡೆಯುವಂತೆ ಶಿಫಾರಸು ಮಾಡಿತ್ತು.

Facebook Comments

Sri Raghav

Admin