ದೆಹಲಿಯಲ್ಲಿ 14 ವರ್ಷಗಳ ಇತಿಹಾಸದಲ್ಲೇ ಕಡಿಮೆ ಪ್ರಮಾಣ ಉಷ್ಣಾಂಶ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.21- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 14 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ಉಷ್ಣಾಂಶ ದಾಖಲಾಗಿದೆ.
ಇಂದು ಮುಂಜಾನೆ 8.5 ಡಿಗ್ರಿ ಸೆಲ್ಷಿಯಸ್‍ನಷ್ಟು ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಕಳೆದ ಶುಕ್ರವಾರ 7.5 ಡಿಗ್ರಿ ಸೆಲ್ಷಿಯಸ್‍ನಷ್ಟು ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿತ್ತು.

ಕಳೆದ 14 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜದಾನಿ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಂದು ಮುಂಜಾನೆ 8.5ರಷ್ಟಿದ್ದ ಉಷ್ಣಾಂಶ ಸೋಮವಾರದ ನಂತರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಕಾರಿ ಕುಲ್‍ಪೀದ್ ಶ್ರೀವಾತ್ಸವ್ ತಿಳಿಸಿದ್ದಾರೆ.

ಉಷ್ಣಾಂಶ ಕುಸಿತದಿಂದಾಗಿ ದೆಹಲಿಯಾದ್ಯಂತ ಶೀತ ಗಾಳಿ ಬೀಸುತ್ತಿರುವುದರಿಂದ ನಾಗರಿಕರು ಮನೆ ಬಿಟ್ಟು ಬರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Facebook Comments