ದೆಹಲಿ ಚುನಾವಣೆ ಫಲಿತಾಂಶದತ್ತ ಎಲ್ಲರ ಚಿತ್ತ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.10- ರಾಷ್ಟ್ರ ರಾಜಕಾರಣದಲ್ಲೂ ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಿಗೆ ನಡೆದ ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದ್ದು , ಎಲ್ಲರ ಚಿತ್ತ ರಾಜಧಾನಿಯತ್ತ ನಡೆದಿದೆ. ಚುನಾವಣೋತ್ತರ ಸಮೀಕ್ಷೆ ಪ್ರಕಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಪ್ರಕಾರ ಎಎಪಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂಬ ಲೆಕ್ಕಾಚಾರವಿದೆ.
ಆದರೆ ಎಕ್ಸಿಟ್ ಪೋಲ್ ಎಕ್ಸಾಟ್ ರಿಸಲ್ಟ್ ಅಲ್ಲ ಎಂದಿರುವ ಬಿಜೆಪಿ ಗೆಲುವಿನ ವಿಶ್ವಾಸದಲ್ಲಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 36 ಸ್ಥಾನಗಳ ಮ್ಯಾಜಿಕ್ ನಂಬರ್ ಅಗತ್ಯವಿದೆ. ಎಎಪಿ -56, ಬಿಜೆಪಿ -14 ಹಾಗೂ ಕಾಂಗ್ರೆಸ್-0 ಸ್ಥಾನಗಳನ್ನು ಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ -67, ಬಿಜೆಪಿ -3 ಮತ್ತು ಕಾಂಗ್ರೆಸ್-0 ಸ್ಥಾನಗಳನ್ನು ಗಳಿಸಿತ್ತು.

ಒಟ್ಟಾರೆ ನಾಳೆಯ ಚುನಾವಣಾ ಫಲಿತಾಂಶ ದೇಶದ ಗಮನ ಸೆಳೆದಿದೆ. ಬೆಳಗ್ಗೆ 7 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು , 10 ಗಂಟೆಯ ವೇಳೆಗೆ ಸ್ಪಷ್ಟ ಚಿತ್ರಣ ಲಭಿಸುವ ನಿರೀಕ್ಷೆ ಇದೆ.ಫಲಿತಾಂಶ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Facebook Comments