ದೆಹಲಿಯಲ್ಲಿ ಭೀಕರ ಅಗ್ನಿ ದುರಂತ, ಪ್ರಧಾನಿ ಮೋದಿ ದಿಗ್ಭ್ರಮೆ, ಪರಿಹಾರ ನೀಡಲು ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.8- ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವು-ನೋವು ಸಂಭವಿಸಿರುವ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ನೊಂದವರಿಗೆ ಸಾಂತ್ವನ ಹೇಳಿರುವ ಅವರು ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದೊಂದು ಅತ್ಯಂತ ಭಯಾನಕ ಘಟನೆ. ಮೃತರು ಮತ್ತು ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದರು.ಪರಿಸರ ಸಚಿವ ಇಮ್ರಾನ್ ಹುಸೇನ್ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸರ್ಕಾರವು ಈ ದುರಂತ ಕುರಿತು ತನಿಖೆಗೆ ಆದೇಶಿಸಿದೆ.

ನಿರ್ಲಕ್ಷ್ಯದಿಂದ ಸಂಭವಿಸಿರುವ ಈ ದುರ್ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್‍ಗಾಂಧಿ ಅವರು ಕೂಡ ಬೆಂಕಿ ದುರಂತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಾವಿಗೀಡಾದವರು ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು ಕೇಂದ್ರ ಮತ್ತು ದೆಹಲಿ ಸರ್ಕಾರ ಮೃತರ ಕುಟುಂಬಗಳು ಮತ್ತು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮುಗಿಲು ಮುಟ್ಟಿದ ಆಕ್ರಂಧನ: ಸುದ್ದಿ ತಿಳಿಯುತ್ತಿದ್ದಂತೆ ಕಾರ್ಖಾ ನೆ ಕಾರ್ಮಿಕರ ಕುಟುಂಬ ವರ್ಗದವರು, ಬಂಧು-ಮಿತ್ರರು ಸ್ಥಳಕ್ಕೆ ದಾವಿಸಿ ಕಣ್ಣೀರಿಡುತ್ತಿದ್ದ ದೃಶ್ಯ ಕರುಳು ಕಿವುಚುವಂತಿತ್ತು. ತಮ್ಮವರನ್ನು ಕಳೆದುಕೊಂಡ ನತದೃಷ್ಟರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹೆಣಗಾಡಬೇಕಾಯಿತು. ಈ ಪ್ರದೇಶದ ಸುತ್ತಮುತ್ತಲ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಬಂದ್ ಮಾಡಲಾಗಿದ್ದು, ಝಾನ್ಸಿರಾಣಿ ಫ್ಲೈ ಓವರ್ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಟ್ರಾಫಿಕ್ ಜಾಮ್‍ನಿಂದ ನಾಗರಿಕರು ಭಾರೀ ತೊಂದರೆ ಅನುಭವಿಸುವಂತಾಯಿತು.

Facebook Comments

Sri Raghav

Admin