ದೆಹಲಿಯ ನಿಜಾಮುದ್ದೀನ್ ನಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಮಂದಿಗೆ ಕ್ವಾರಂಟೈನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.1-ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ , ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯ ದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.

# ಶಿವಮೊಗ್ಗದ 6 ಮಂದಿಗೆ ಕ್ವಾರೆಂಟೈನ್ :
ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಬಾಂಗ್ಲವಾಲಿಯ ಮಸೀದಿಯಲ್ಲಿ ಆಯೋಜಿಸಿದ್ದ ಧಾರ್ಮಿಕ ಸಭೆ ಈಗ ಆತಂಕದ ಕೇಂದ್ರವಾಗಿದೆ. ರಾಜ್ಯದ ಸುಮಾರು 300 ಮಂದಿ ದೆಹಲಿಯ ಧಾರ್ಮಿಕ ಸೆಮಿನಾರ್ ನಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ಆತಂಕ ಹೆಚ್ಚಾಗಿದೆ. ಏತನ್ಮಧ್ಯೆ, ಶಿವಮೊಗ್ಗ ಮೂಲದ 6 ಮಂದಿ ದೆಹಲಿಯಿಂದ ವಾಪಾಸ್ ಆಗಿದ್ದು, ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದೆಹಲಿಯಿಂದ 6 ಜನ ಶಿವಮೊಗ್ಗಕ್ಕೆ ಧಾವಿಸಿದ್ದು, ಅವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಆರು ಮಂದಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ತೀವ್ರ ನಿಗಾ ವಹಿಸಲಾಗಿದೆ. ಅದೃಷ್ಟವಶಾತ್ ಈ ಆರು ಮಂದಿಯಲ್ಲೂ ಕೊರೊನಾ ಸಂಬಂಧಿತ ಲಕ್ಷಣ ಕಾಣಿಸಿಕೊಂಡಿಲ್ಲ ಎಂದು ಶಿವಮೊಗ್ಗ ಡಿಎಚ್‌ಓ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟಪಡಿಸಿದ್ದಾರೆ.

# 300 ಮಂದಿ ಭಾಗಿ : 
ತಬ್ಲೀಗಿ ಜಮಾಅತ್ ನ ದಿಲ್ಲಿ ಕೇಂದ್ರ ಕಚೇರಿಯಾಗಿರುವ ಮರ್ಕಝ್ ನಿಝಾಮುದ್ದೀನ್ ನಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂಕ್ವಾರೆಂಟೈನ್ ಮಾಡಲಾಗುತ್ತಿದೆ. ಇದರಲ್ಲಿ 12 ಜನರ ಕೋವಿಡ್-19 ಪರೀಕ್ಷೆ ವರದಿ ನೆಗೆಟಿವ್ ಎಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

 

Facebook Comments

Sri Raghav

Admin