“ಬೆಂಗಳೂರಲ್ಲಿ ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.3- ನಗರದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ವಿಶೇಷ ಆಯುಕ್ತ ರಂದೀಪ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಲೇಔಟ್‍ನಲ್ಲಿ ಎರಡು, ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿರುವುದು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಡೆಲ್ಟಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.

ಎರಡನೆ ಅಲೆ ಕಾಣಿಸಿಕೊಂಡ ನಂತರ ಡೆಲ್ಟಾ ಪ್ರಕರಣಗಳು ಪತ್ತೆಯಾಗಿದ್ದವು. ಡೆಲ್ಟಾ ಪ್ಲಸ್ ಪ್ರಕರಣಗಳು ಅಷ್ಟಾಗಿ ಕಂಡುಬಂದಿಲ್ಲ. 136 ಮಂದಿಯ ಸ್ವಾಬ್‍ಅನ್ನು ಜಿನೀವ್ ಸ್ವಿಕ್ವೆನ್ಸ್ ಟೆಸ್ಟ್‍ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಡೆಲ್ಟಾ ಪ್ಲಸ್ ಪ್ರಕರಣಗಳು ಕಂಡುಬಂದರೂ ಅದಕ್ಕೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡೆಲ್ಟಾ ಪ್ಲಸ್‍ಗೆ ಯಾವುದೇ ರೀತಿಯ ಬೇರೆ ಚಿಕಿತ್ಸೆ ಇಲ್ಲ. ಕೊರೊನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆಯ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಹೋಂ ಕ್ವಾರಂಟೈನ್, ಐಸೊಲೇಷನ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಮೂಲಕ ನಿರ್ವಹಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

Facebook Comments