ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು ಪ್ರಕರಣದಲ್ಲಿ ಕುಳ್ಳ ದೇವರಾಜ್ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.2- ಶಾಸಕ ವಿಶ್ವನಾಥ್ ಅವರ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಳ್ಳ ದೇವರಾಜ್ ಎಂಬಾತನನ್ನು ರಾಜಾನುಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರಿಗೆ ಸದ್ಯದಲ್ಲಿಯೇ ಪೊಲೀಸರು ನೋಟೀಸ್ ನೀಡಲಿದ್ದಾರೆ.

ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಕೋನವಂಶಿಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡುತ್ತಿದ್ದ ಅವರು, ಪ್ರಕರಣದ ತನಿಖೆಗೆ ಒಂದು ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ವಿವರಿಸಿದರು.

ಇಂದು ವಿಶ್ವನಾಥ್ ಅವರು ರಾಜಾನುಕುಂಟೆ ಠಾಣೆಗೆ ಬಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋಗಳನ್ನು ನೀಡಿದ್ದಾರೆ. ಅವುಗಳನ್ನು ಹೆಚ್ಚಿನ ತನಿಖೆಗಾಗಿ ಎಫ್‍ಎಸ್‍ಎಲ್‍ಗೆ ಕಳುಹಿಸಲಾಗುವುದು. ವೀಡಿಯೋಗಳ ಸತ್ಯಾಸತ್ಯತೆ ಬಗ್ಗೆ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Facebook Comments