ಬಿಜೆಪಿಯವರಿಗೆ ಮಾನ-ಮರ್ಯಾದೆ ಇದೆಯಾ? : ಟೆಲಿಫೋನ್ ಕದ್ದಾಲಿಕೆ ಆರೋಪಕ್ಕೆ ಗೌಡರ ಆಕ್ರೋಶ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.15- ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಆರೋಪಕ್ಕೆ ಆಕ್ರೋಶಗೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಾವ ಮುಖ್ಯಮಂತ್ರಿ ಕಾಲದಲ್ಲಿ ಏನೇನಾಗಿದೆ ಎಂಬುದು ಎಲ್ಲ ಗೊತ್ತಿದೆ ಎಂದರು.

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೆ ಕೆಲಸ ಇಲ್ವೇ ಇಲ್ಲ. ಅವರು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ.

ಅವರಿಗೆ ಮಾನ-ಮರ್ಯಾದೆ ಇದೆಯಾ? ಫೋನ್ ಕದ್ದಾಲಿಕೆ ಏಕೆ? ನೇರವಾಗಿ ಹೊತ್ತುಕೊಂಡು ಹೋದ ಜನ ಅವರು ಎಂದು ಸಿಟ್ಟಿನಿಂದ ನುಡಿದರು. ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕದ್ದಾಲಿಕೆ ಮಾಡಿದ್ದಾರೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಗೌಡರು ಯಾವ ಕಾಲದಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಈಗ ಚರ್ಚೆ ಬೇಕಿಲ್ಲ. ಕೇಂದ್ರ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿದೆ.

ಯಾವ ರಾಜ್ಯದಲ್ಲಿ ಫೋನ್ ಕದ್ದಾಲಿಕೆಯಾಗಿದೆ ಎಂಬುದೆಲ್ಲವೂ ಗೊತ್ತಿದೆ. ಫೋನ್ ಕದ್ದಾಲಿಕೆ ವಿಚಾರವಾಗಿ ತುಂಬಾ ಮಾತನಾಡಬಲ್ಲೆ ಎಂದು ಆಕ್ರೋಶಭರಿತರಾಗಿ ಪ್ರತಿಕ್ರಿಯಿಸಿದರು.

Facebook Comments