ಶಾರದಾಂಬೆ ಮೊರೆಹೋದ ಗೌಡರ ಕುಟುಂಬ, ಸಂಕಷ್ಟ ನಿವಾರಣೆಗಾಗಿ ಹೋಮ, ಹವನ

ಈ ಸುದ್ದಿಯನ್ನು ಶೇರ್ ಮಾಡಿ

Devegowda--01

ಚಿಕ್ಕಮಗಳೂರು, ಸೆ.22- ಶೃಂಗೇರಿಯ ಶಾರದಾಂಬೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬದವರು ವಿವಿಧ ಹೋಮ, ಹವನಗಳನ್ನು ನೆರವೇರಿಸಿದರು.ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ದೇವೇಗೌಡರು, ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ರೇವಣ್ಣ, ಚೆನ್ನಮ್ಮ ದೇವೇಗೌಡ, ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ಅವರು ಶೃಂಗೇರಿಯ ಶ್ರೀ ಭಾರತಿರ್ಥ ಸ್ವಾಮೀಜಿಗಳ ಆಶೀರ್ವಾದವನ್ನು ಪಡೆದರು.

ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಮೊದಲಿಗೆ ಗಣಪತಿ ಹೋಮ, ಮೃತ್ಯುಂಜಯ ರುದ್ರಹೋಮ, ನಂತರ ಪ್ರತಿಕ್ರಿಯಾ ಶಾಲಿನಿ ಹೋಮ ನೆರವೇರಿಸಲಾಯಿತು. ವಿಧಾನಸಭೆ ಚುನಾವಣೆಗೂ ಮುನ್ನ ಅತಿರುದ್ರ ಯಾಗ ನೆರವೇರಿಸಲಾಗಿತ್ತು. ಈಗ ಸಂಷ್ಟ ನಿವಾರಣೆಗಾಗಿ ಇಂದು ಶೃಂಗೇರಿಯಲ್ಲಿ ವಿವಿಧ ಹೋಮ-ಹವನಗಳನ್ನು ಗೌಡರ ಕುಟುಂಬದವರು ನೆರವೇರಿಸಿದ್ದಾರೆ.

ನಿನ್ನೆ ಮಧ್ಯರಾತ್ರಿ 12.30ರಲ್ಲಿ ಎಚ್.ಡಿ.ಕುಮಾರಸ್ವಾಮಿ ಶೃಂಗೇರಿಗೆ ಆಗಮಿಸಿದ್ದರು. ಈ ವೇಳೆ ಸಂಗಮೇಶ್ವರಪೇಟೆ, ಜಯಪುರ, ಬಾಳೆಹೊನ್ನೂರಿನಲ್ಲಿ ಪಕ್ಷದ ಕಾರ್ಯಕರ್ತರು ತಡರಾತ್ರಿವರೆಗೂ ಕಾದು ನಿಂತು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.  ದೇವರು ನಿಮ್ಮನ್ನು , ಸರ್ಕಾರವನ್ನು ರಕ್ಷಿಸಲಿ ಎಂದು ಜನರು ಈ ವೇಳೆ ಹಾರೈಸಿದರು.

# ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ:
ಹೋಮ ಕಾರ್ಯ ಮುಗಿಸಿ ಚಿಕ್ಕಮಗಳೂರಿಗೆ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಪಂನ ನಜೀರ್‍ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಚುನಾಯಿತ ಪ್ರತಿನಿಧಿಗಳಿಂದ ಜಿಲ್ಲೆಯ ಅತಿವೃಷ್ಟಿ, ಅನಾವೃಷ್ಟಿಗಳ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಧರ್ಮೇಗೌಡ, ಎಸ್.ಎಲ್.ಭೋಜೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉಪಸ್ಥಿತರಿದ್ದರು.

Facebook Comments

Sri Raghav

Admin