ಅಸಮಾಧಾನ ಶಮನಗೊಳಿಸಲು ಅಖಾಡಕ್ಕಿಳಿದ ಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

Devegowda-JDS

ಬೆಂಗಳೂರು, ಜೂ.8- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ನಂತರ ಕಾಂಗ್ರೆಸ್‍ನಲ್ಲಿ ಉಂಟಾಗಿರುವ ಅಸಮಾಧಾನ ಶಮನಗೊಳಿಸಲು ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಮುಂದಾಗಿದ್ದಾರೆ.
ಇಂದು ಬೆಳಗ್ಗೆ ಖಾತೆ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯ ಮಾನಗಳಿಗೆ ಸಂಬಂಧಿಸಿದಂತೆ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಮಾತುಕತೆ ನಡೆಸಿ, ಕಾಂಗ್ರೆಸ್‍ನ ಅತೃಪ್ತರ ಮನವೊಲಿಸುವ ಪ್ರಯತ್ನ ಮಾಡುವ ಮೂಲಕ ಸರ್ಕಾರಕ್ಕೆ ಎದುರಾಗ ಬಹುದಾದ ಸಮಸ್ಯೆಗಳನ್ನು ದೂರ ಮಾಡಲು ಪ್ರಯತ್ನಿಸಿದ್ದಾರೆ.

ಇಂದು ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಮನವೊಲಿಸಲು ಪ್ರಯತ್ನಿಸಿದರು.ಇದಕ್ಕೂ ಮುನ್ನ ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸುವುದಾಗಿಯೂ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರ ಮನವೊಲಿಸುವ ಪ್ರಯತ್ನವನ್ನು ಉಭಯ ಪಕ್ಷಗಳ ನಾಯಕರು ಮಾಡುತ್ತಿದ್ದಾರೆ.

ಜೆಡಿಎಸ್‍ನಲ್ಲಿ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನವಿದ್ದರೂ ಕಾಂಗ್ರೆಸ್‍ನಷ್ಟು ಗಂಭೀರ ಸ್ವರೂಪದ ಅತೃಪ್ತಿ ಹೊಗೆಯಾಡುತ್ತಿಲ್ಲ. ಹೀಗಾಗಿ ಜೆಡಿಎಸ್ ನಾಯಕರು ಕಾಂಗ್ರೆಸ್‍ನಲ್ಲಿ ಬಂಡೆದ್ದಿರುವ ಶಾಸಕರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.ಸಮ್ಮಿಶ್ರ ಸರ್ಕಾರದಲ್ಲಿ ಅಂಗ ಪಕ್ಷವಾದ ಕಾಂಗ್ರೆಸ್‍ನಲ್ಲಿ ಉಂಟಾಗಿರುವ ಬಂಡಾಯ ಶಮನ ಮಾಡಲು ತಮ್ಮದೇ ಆದ ರೀತಿಯಲ್ಲಿ ಜೆಡಿಎಸ್ ನಾಯಕರು ಯತ್ನಿಸುತ್ತಿದ್ದಾರೆ.

Facebook Comments

Sri Raghav

Admin