ರೈತರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ : ಫಡ್ನವೀಸ್

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ : ಮಹಾರಾಷ್ಟ್ರ ರೈತರ ಹಿತ ಕಾಪಾಡುವಲ್ಲಿ ಹಾಗೂ ಮರಾಠ ಮೀಸಲಾತಿ ಜಾರಿ ವಿಷಯದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಆರೋಪಿಸಿದ್ದಾರೆ.

ರೈತರ ಆಶ್ವಾಸನೆ ನೆರವೇ ರಿಸುವ ಭರವಸೆ ನೀಡಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿ ದ್ದಾರೆ ಎಂದು ಅವರು ದೂರಿದರು.

ಎನ್‍ಸಿಪಿ , ಕಾಂಗ್ರೆಸ್ ಮೈತ್ರಿ ಕೂಟದ ನೆರವಿ ನೊಂದಿಗೆ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರು ಮಹಾ ವಿಕಾಸ್ ಅಗಡಿ ಸರ್ಕಾರ ರಚಿಸಿ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Facebook Comments