ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನಕ್ಕೆ ಮುಕ್ತ ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ, ಜೂ.8- ಸರ್ಕಾರದ ಮಾರ್ಗಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗ್ರತೆ ಅನುಸರಿಸಿ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್ , ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು ನೀಡುವ ಸಲಹೆ ಸೂಚನೆಗಳನ್ನು ಗಮನಿಸಿ ಕಟ್ಟುನಿಟ್ಟಾಗಿ ಪಾಲಿಸಿ ಭಕ್ತರು ಸಹಕರಿಸಬೇಕು.

ಧರ್ಮಾಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭಕ್ತಾದಿಗಳು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಸಂಜೆ 4.00 ರಿಂದ 6.30 ಗಂಟೆಯವರೆಗೆ ಭೇಟಿ ಮಾಡಲು ಅವಕಾಶವಿದೆ.

ಭಕ್ತಾದಿಗಳಿಗೆ ಅನ್ನ ಪ್ರಸಾದ ಸೇವೆಯನ್ನು ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಬೆಳಿಗ್ಗೆ 6.30 ರಿಂದ 2.00 ಗಂಟೆ ಸಂಜೆ 5 ರಿಂದ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin