ಡಿ.ಜೆ.ಹಳ್ಳಿ ಗಲಭೆ : ಪರಾರಿಯಾಗಿರುವ ಪುಂಡರ ಬಂಧನಕ್ಕೆ 3 ಟೀಮ್ ರಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.13- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಮೊನ್ನೆ ರಾತ್ರಿ ಬೆಂಕಿ ಹಚ್ಚಿ ದಾಂಧಲೆ ಮಾಡಿ ಪರಾರಿಯಾಗಿರುವ ಗಲಭೆಕೋರರ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಈ ತಂಡಗಳು ಈಗಾಗಲೇ ಪರಾರಿಯಾಗಿರುವ ಗಲಭೆಕೋರರ ಬಂಧನಕ್ಕೆ ಬಲೆ ಬೀಸಿವೆ.ಗಲಭೆ ಸಂದರ್ಭದಲ್ಲಿ ತೆಗೆದ ವಿಡಿಯೋ ಆಧರಿಸಿ ಆರೋಪಿಗಳನ್ನು ಗುರುತಿಸಿ ಅವರ ಬಂಧನಕ್ಕೆ ಈ ತಂಡಗಳು ಮುಂದಾಗಿವೆ.

ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಈವರೆಗೂ ಸಂಘಟನೆಯ ಮುಖಂಡರು ಸೇರಿದಂತೆ 147ಕ್ಕೂ ಹೆಚ್ಚು ಆರೋಪಿಗಳನ್ನು ಬಂಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಸಿದಂತೆ ಮತ್ತು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆಗಳ ಮುಂದೆ ನಡೆದಂತಹ ದಾಂಧಲೆ ಬಗ್ಗೆ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣೆಗಳಲ್ಲಿ ಗಲಭೆಕೋರರ ವಿರುದ್ಧ ಎಫ್‍ಐಆರ್ ದಾಖಲಾಗಿವೆ.

ಈ ಎರಡೂ ಠಾಣೆಗಳಲ್ಲಿ ಗಲಭೆಕೋರರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin