ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರಿಂದ ಹೈಡ್ರಾಮಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.12- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ನಂತರ ಶಿವಾಜಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳು ಸ್ತಬ್ಧಗೊಂಡಿವೆ.  ಶಿವಾಜಿನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಇಡೀ ಪ್ರದೇಶ ಬಿಕೋ ಎನ್ನುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಗಲಭೆ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ಮೇಲೆ ನಿಗಾ ಇಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ.

#ಸಂಬಂಕರ ಆಕ್ರೋಶ:
ಗೋಲಿಬಾರ್‍ನಿಂದ ಮೃತಪಟ್ಟಿರುವವರ ಸಂಬಂಕರು ಬೌರಿಂಗ್ ಆಸ್ಪತ್ರೆ ಮುಂಭಾಗ ಹೈ ಡ್ರಾಮಾ ನಡೆಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವವರ ಮರಣೋತ್ತರ ಪರೀಕ್ಷೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಮೃತರ ಸಂಬಂಕರು ಆಸ್ಪತ್ರೆ ಮುಂಭಾಗ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಪೊಲೀಸರು ಮತ್ತು ವೈದ್ಯರು ಆಕ್ರೋಶಗೊಂಡ ಮೃತರ ಸಂಬಂಕರನ್ನು ಸಮಾಧಾನಪಡಿಸುವಲ್ಲಿ ಸಾಕು ಸಾಕಾಯಿತು. ಪೊಲೀಸ್ ಗೋಲಿಬಾರ್ ಸಂದರ್ಭದಲ್ಲಿ ಮತ್ತೆ ಕೆಲವರಿಗೆ ಗುಂಡು ತಗುಲಿರುವ ಸಾಧ್ಯತೆ ಇದ್ದು, ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮತ್ತೆ ಕೆಲವರು ಪೊಲೀಸರಿಗೆ ಹೆದರಿ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ಒದ್ದಾಡುತ್ತಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ.

Facebook Comments

Sri Raghav

Admin