ಡಿಜಿಹಳ್ಳಿಯಲ್ಲಿ ಬೆಂಕಿಯಿಟ್ಟ 73 ಪುಂಡರ ವಿರುದ್ಧ ರೌಡಿ ಪಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.17- ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪಾಲ್ಗೊಂಡ 73 ಪುಂಡರ ವಿರುದ್ಧ ರೌಡಿ ಪಟ್ಟಿ ತೆರೆಯಲು ಪೊಲೀಸರು ತೀರ್ಮಾನಿಸಿದ್ದಾರೆ.

ಗಲಭೆಕೋರರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಇದುವರೆಗೂ 300ಕ್ಕೂ ಹೆಚ್ಚು ಪುಂಡರಿಗೆ ಹೆಡೆಮುರಿ ಕಟ್ಟಿದ್ದು, ಇವರಲ್ಲಿ 73 ಮಂದಿ ವಿರುದ್ಧ ರೌಡಿಪಟ್ಟಿ ತೆರೆಯಲು ನಿರ್ಧರಿಸಿದ್ದಾರೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ಬಂತರ ಪಾತ್ರವೇನು? ಸರ್ಕಾರ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮತ್ತು ಠಾಣೆಗಳ ಮೇಲೆ ನಡೆದ ದಾಳಿಯಲ್ಲಿ ಇವರ ಕೈವಾಡವಿದೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಗಲಭೆ ಸಂದರ್ಭದಲ್ಲಿ ಇವರು ಅಮಾಯಕರನ್ನು ಪ್ರಚೋದಿಸುವ ಕಾರ್ಯ ಮಾಡಿದರೆ? ಅಥವಾ ಖುದ್ದು ದಾಳಿಗೆ ಮುಂದಾದರೇ? ಇವರು ಯಾವ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಾರೆ ಎಂಬುದರ ಬಗ್ಗೆ ಪೆÇಲೀಸರು ಜಾಲಾಡುತ್ತಿದ್ದಾರೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣದಲ್ಲಿ ಮಾತ್ರ ಇವರ ಪಾತ್ರವಿತ್ತೆ ಅಥವಾ ಹಿಂದೆ ನಡೆದ ಕೋಮು ಗಲಭೆಗಳಲ್ಲಿ ಇವರು ಪಾಲ್ಗೊಂಡಿದ್ದರೇ? ಜತೆಗೆ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದರೋ ಎಂಬ ಬಗ್ಗೆಯೂ ಪೆÇಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಒಟ್ಟಾರೆ ನಗರದಲ್ಲಿ ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಬಾರದು. ಒಂದು ವೇಳೆ ಕಾನೂನು ಕೈಗೆತ್ತಿಕೊಂಡರೆ ಏನು ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಬಗ್ಗೆ ಪುಂಡರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪೊಲೀಸರು ಎಲ್ಲ ರೀತಿಯ ಕಸರತ್ತು ನಡೆಸುತ್ತಿದ್ದಾರೆ.

Facebook Comments

Sri Raghav

Admin